ಱ್ಯಾಂಕ್ ನ ಜೊತೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕೆಲಸ ಮಾಡಬೇಕು: ಸುಗೇಂದ್ರ


ಸಂಜೆ ವಾಣಿ ವಾರ್ತೆ
ಕೊಟ್ಟೂರು, ನ.05: ವಿಜಯನಗರ ಮತ್ತು ಬಳ್ಳಾರಿ ನಮ್ಮ ಅವಳಿ ಜಿಲ್ಲೆಗಳು ಶಿಕ್ಷಣದಲ್ಲಿ ತಳಮಟ್ಟವನ್ನು ತಲುಪಿದೆ, ಹಾಗಾಗಿ ಪ್ರತಿಯೊಂದು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು  ವಿದ್ಯಾರ್ಥಿಗಳನ್ನು  ಪ್ರಥಮ ಶ್ರೇಣಿಯಲ್ಲಿ ಗಳಿಸುವ ಜೊತೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆ ಶ್ರಮಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅವಳಿ ಜಿಲ್ಲೆಯ ಉಪನಿರ್ದೇಶಕರಾದ  ಹೆಚ್. ಸುಗೇಂದ್ರ ಅವರು ಹೇಳಿದರು.
ಪಟ್ಟಣದ ಇಂದು ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು, ತಾಲೂಕು ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಸಂಘ ಕೊಟ್ಟೂರು ವತಿಯಿಂದ ಶೈಕ್ಷಣಿಕ ಸಮಾವೇಶ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಮಾರಂಭದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಅವರು ನಮ್ಮ ಅವಳಿ ಜಿಲ್ಲೆಯು 2021-22 ಸಾಲಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 32 ನೇ ಸ್ಥಾನ ಪಡೆದುಕೊಂಡಿದೆ. ಪ್ರತಿಯೊಂದು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಎಲ್ಲಾ ವಿದ್ಯಾರ್ಥಿಗಳನ್ನು ಪಾಸು ಮಾಡುವಂತೆ ಶ್ರಮಿಸಿ 25 ನೇ ಸ್ಥಾನಕ್ಕೆ ಬರುವಂತೆ ಮಾಡಬೇಕು ಎಂದು ತಿಳಿಸಿದರು.
ನಂತರ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಅಧ್ಯಕ್ಷರಾದ ಶ್ರೀಕಂಠೇಗೌಡ ಮಾತನಾಡಿ ಶಿಕ್ಷಣಕ್ಕೆ ಅಗಾಧವಾದ ಶಕ್ತಿ ಇದೆ, ಈ ಶಕ್ತಿಯನ್ನು ವಿದ್ಯಾರ್ಥಿಗಳು ಬಳಸಿಕೊಂಡು ಜೀವನವನ್ನು ಕಟ್ಟಿಕೊಂಡರೆ ಸಾರ್ಥಕವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಜೀವನವನ್ನು ಕಟ್ಟಿಕೊಳ್ಳುವ  ಪ್ರಮುಖ ಘಟ್ಟ ಪದವಿ ಪೂರ್ವ ಶಿಕ್ಷಣ. ಈ  ಪದವಿ ಪೂರ್ವ ಶಿಕ್ಷಣಕ್ಕೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಶಿಕ್ಷಣವನ್ನು ಉಳಿಸಿಕೊಳ್ಳುವ ಹೊಣೆ ನಮ್ಮೆಲ್ಲರ ಕರ್ತವ್ಯವಾಗಿದೆ, ಪದವಿ ಪೂರ್ವ ಶಿಕ್ಷಣಕ್ಕೆ 9, 10 ನ್ನು ಸೇರಿಕೊಂಡರೆ ಅದನ್ನು ನಾವು ಸ್ವೀಕಾರ ಮಾಡುತ್ತೇವೆ ಆದರೆ ಪದವಿ ಪೂರ್ವ ಶಿಕ್ಷಣಕ್ಕೆ ಯಾವುದೇ ಅಡ್ಡಿಯ ಆತಂಕ ಬಂದರೆ ಅದನ್ನು ತಡೆಯೊಡ್ಡಿ ಹೋರಾಟವನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಪದವಿ ಪೂರ್ವ ಪ್ರಾಚಾರ್ಯರ ಸಂಘದ ತಾಲೂಕು ಅಧ್ಯಕ್ಷರಾದ ಸೋಮಶೇಖರಪ್ಪ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ನಿಂಗೇಗೌಡ ಮಾತನಾಡಿದರು, ಪ್ರಾಚಾರ್ಯರಾದ  ನಿರ್ಮಲ ಶಿವನ ಗುತ್ತಿ ಅವರು ಪ್ರಾಸ್ತಾವಿಕ ನುಡಿದರು.ಇಂದು ಕಾಲೇಜಿನ ಆಡಳಿತದ ವ್ಯವಸ್ಥಾಪಕರಾದ ವೀರಭದ್ರಪ್ಪ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ 9 ಕಾಲೇಜುಗಳಲ್ಲಿ ಮೊದಲ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ತಿಮ್ಮಯ್ಯ ಪುರ್ಲೆ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಸಂಘದ ವಿಜಯನಗರ ಜಿಲ್ಲೆಯ ಅಧ್ಯಕ್ಷರಾದ ನಾಗರಾಜ್ ಹವಲ್ದಾರ್, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಂಘದ ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಮಹೀಷಿ, ಪ್ರಾಚಾರ್ಯರ ಸಂಘದ ತಾಲೂಕು ಕಾರ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿಯಾದ ನಿರ್ಮಲಾ ಶಿವನಗುತ್ತಿ, ಪ್ರಾಚಾರ್ಯರ ಸಂಘದ ತಾಲೂಕು ಖಜಾಂಚಿ ಜಯಣ್ಣ, ಹಾಗೂ ಇತರರು ಉಪಸ್ಥಿತರಿದ್ದರು.