ಲಂಚ ಪಡೆದು ವಂಚನೆ ಪ್ರಕರಣ: ಪ್ರಸಾದ್ ಅತ್ತಾವರ್‌ಗೆ ಜಾಮೀನು

ಮಂಗಳೂರು, ಎ.೭- ರಾಯಚೂರು ವಿವಿಯಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಮಂಗಳೂರು ವಿವಿಯ ಪ್ರಾಧ್ಯಾಪಕರಿಂದ ಲಂಚ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕಾಧ್ಯಕ್ಷ ಪ್ರಸಾದ್ ಅತ್ತಾವರ್ ಅವರಿಗೆ ಜಾಮೀನು ಲಭಿಸಿದೆ.
ನನ್ನನ್ನು ವಿನಾ ಕಾರಣ ರಾಜಕೀಯ ದ್ವೇಷದಿಂದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಒಬ್ಬ ಸರಕಾರಿ ಪ್ರಾಧ್ಯಾಪಕ ಕುಲಪತಿ ಹುದ್ದೆಗೆ ಲಂಚ ಕೊಡುವುದೆಂದರೆ ಅವರು ಕೂಡಾ ಅಪರಾಧ ಎಸಗಿದಂತೆ ಆಗಿದ್ದು, ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಪ್ರಸಾದ್ ಅತ್ತಾವರ ತನ್ನ ವಕೀಲರಾದ ಮಯೂರ ಕೀರ್ತಿ ಮತ್ತು ಅಸೋಸಿಯೇಟ್ಸ್ ಮೂಲಕ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಮಂಗಳೂರಿನ ೭ನೇ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶೆ ಪದ್ಮಾ ಎಂ. ಅವರು ಪ್ರಸಾದ್ ಅತ್ತಾವರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.