ಲಂಚ ಪಡೆದು ಸಿಕ್ಕಿಬಿದ್ದ ಪಿಎಸ್‌ಐ

ಜೋರ್ಹತ್, ಜು.೩೧- ಅಸ್ಸಾಮಿನ ಜೋರ್ಹತ್ ಜಿಲ್ಲೆಯಲ್ಲಿ ೨೦,೦೦೦ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಅಸ್ಸಾಂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಪ್ರಣಬ್ ನಾಥ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದು, ಈತ ಜೋರ್ಹತ್ ಸದರ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ.
ಕ್ರಿಮಿನಲ್ ಪ್ರಕರಣವೊಂದರಲ್ಲಿ ಸಬ್ ಇನ್ಸ್‌ಪೆಕ್ಟರ್ ೫೦,೦೦೦ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದರು.ಈ ಸಂಬಂಧ ಅಸ್ಸಾಂ ಪೊಲೀಸ್ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆ ೧೯೮೮ರ ಕಲಂ ೭ (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.