ಲಕ್ಷ್ಮಣ್ ಪರ ಹಿಂದುಳಿದ ವರ್ಗಗಳ ಮತಯಾಚನೆ

ಸಂಜೆವಾಣಿ ನ್ಯೂಸ್
ಮೈಸೂರು: ಏ.20:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಕೆ.ಎಸ್.ಶಿವರಾಮ್ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಪ್ರಚಾರ ನಡೆಸಲಾಯಿತು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಜಿಲ್ಲಾ ಹಿಂದುಳಿದ ಎಲ್ಲಾ ಸಮಾಜದ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಕೊಲ್ಲಾಪುರದ ದೇವಸ್ಥಾನದ ಎದುರಿನಿಂದ ಪ್ರಾರಂಭಗೊಂಡ ಪ್ರಚಾರದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೆಲ್ಲಿಸಿ ಎಂಬ ಅಭಿಯಾನ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಶಿವರಾಮ್ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನೀಡುವ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಹೀಗಾಗಿ ರಾಜ್ಯದ ಅಭಿವೃದ್ಧಿ ಮತ್ತು ಪ್ರತಿಯೊಬ್ಬರೂ ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು
ಈ ವೇಳೆ ನಗರ ಕಾಂಗ್ರೆಸ್ ಒಬಿಸಿ ವಿಭಾಗದ ಅಧ್ಯಕ್ಷ ಎನ್.ಆರ್.ನಾಗೇಶ್, ಮೈಸೂರು ಹೆಚ್.ಎಸ್.ಪ್ರಕಾಶ್, ಯೋಗೇಶ್ ಉಪ್ಪಾರ್, ಮಹೇಂದ್ರ ಕಾಗಿನೆಲೆ, ಲೋಕೇಶ್ ಮಾದಾಪುರ ಸೇರಿ ಹಲವರು ಉಪಸ್ಥಿತಿರಿದ್ದರು.