
ಅಥಣಿ: ಮಾ.3:ರಾಜ್ಯದ ಅನುಭವಿ ಮುತ್ಸದ್ದಿ ರಾಜಕಾರಣಿ ಉಪ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಹೆಸರುವಾಸಿಯಾಗಿ ರಾಜಕಾರಣದಲ್ಲಿ ತಮ್ಮದೆಯಾದ ವರ್ಚಸ್ಸು ಹೊಂದಿರುವ ಮಾಜಿ ಡಿಸಿಎಂ ಹಾಗೂ ವಿಪ ಸದಸ್ಯ ಲಕ್ಷ್ಮಣ ಸವದಿ ಅವರು ಬರುವ ಮುಂದಿನ ದಿನಮಾನದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ನದಿ ಇಂಗಳಗಾಂವದ ಸಿದ್ಧಲಿಂಗ ಮಹಾಸ್ವಾಮೀಜಿ ಅವರು ಆಶೀರ್ವದಿಸಿದರು,
ಅವರು ತಾಲೂಕಿನ ನದಿ ಇಂಗಳಗಾವ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲಿನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಬಿಳ್ಕೊಡುವ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡುತ್ತಾ ನಮ್ಮ ಗ್ರಾಮಕ್ಕೆ ಪಬ್ಲಿಕ್ ಶಾಲೆಗೆ ಸುಸಜ್ಜಿತ ಹಾಗೂ ಉತ್ತಮ ಗುಣಮಟ್ಟದ ಒಳ್ಳೆಯ ಕಟ್ಟಡ ನಿರ್ಮಾಣ ಮಾಡಿರುವುದು ಖುಷಿಯ ವಿಚಾರ, ಅಭಿವೃದ್ಧಿ ಕೆಲಸಗಳ ಮೂಲಕ ಮನೆಮಾತಾಗಿರುವ ಲಕ್ಷಣ ಸವದಿಯವರು ಮುಂದಿನ ದಿನಮಾನಗಳಲ್ಲಿ ರಾಜ್ಯದ
ಮುಖ್ಯಮಂತ್ರಿ ಆಗಲಿ ಎಂದು ಹಾರೈಸಿದರು.
ಈ ಸಂಧರ್ಭದಲ್ಲಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಗಜಾನನ ಮನಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಶಾಂತಯ್ಯ ಹಿರೇಮಠ, ವಿವೇಕ ನಾರಗೊಂಡ, ಎಸ್ ಗೂಳಪ್ಪನ್ನವರ, ಎಸ್ ಡಿ ಎಮ್ ಸಿ ಅಧ್ಯಕ್ಷ ಸತೀಶ ಗುಂಡಕಲ್ಲಿ, ಗ್ರಾ ಪಂ ಅಧ್ಯಕ್ಷ ಶಂಕರ ಠಕ್ಕಣ್ಣವರ, ಪಿಕೆಪಿಎಸ ಅಧ್ಯಕ್ಷ ಮಲ್ಲಪ್ಪ ಠಕ್ಕಣ್ಣವರ, ನಾಗಪ್ಪ ಗೂಳಪ್ಪನ್ನವರ, ಗುರುಬಸು ತೇವರಮನಿ, ಅಲಗೌಡ ಮುದಿಗೌಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.