ಲಖಿಂಪುರ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ

ಲಕ್ನೋ, ಜು.26- ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ,ಹಿಂಸಾಚಾರ ಘಟನೆಯ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿ ತಿರಸ್ಕರಿಸಿದೆ.ಹೀಗಾಗಿ ಇನ್ನಷ್ಟು ದಿನ ಜೈಲಿನಲ್ಲಿಯೇ ಇರುವಂತಾಗಿದೆ.

ಲಖೀಂಪುರ ಪ್ರಕರಣದಲ್ಲಿ ನಾಲ್ವರು ರೈತರು ಮೃತಪಟ್ಟಿದ್ದು, ಆರೋಪಿ ಹಾಗೂ ಆರೋಪಿಗಳ ಕಾರು ಅಲ್ಲಿಯೇ ಇತ್ತು. ಇದೊಂದು ಘೋರ ಅಪರಾಧದ ಅಡಿಯಲ್ಲಿ ಬರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಮಿಶ್ರಾ ಅವರು ಅಕ್ಟೋಬರ್ 3, 2021 ರಂದು ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರನ್ನು ಕೊಂದ ಘಟನೆಗಾಗಿ ಕೊಲೆ ಪ್ರಕರಣ ಎದುರಿಸುತ್ತಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್ ಮಿಶ್ರಾ ಕಾರ್ ಹರಿಹಾಯಿಸಿದ್ದರು ಎಂದು ಆರೋಪಿಸಲಾಗಿದೆ. ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಗಿತ್ತು.

2022 ರ ಫೆಬ್ರವರಿಯಲಿ ಜಾಮೀನು ನೀಡಲಾಗಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ 2022 ರ ಏಪ್ರಿಲ್‌ನಲ್ಲಿ ರದ್ದುಗೊಳಿಸಿದ್ದರಿಂದ ಮಿಶ್ರಾ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.‌ಇಂದು ನ್ಯಾಯಾಲಯ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರೊಂದಿಗೆ ಸುಪ್ರೀಂಕೋರ್ಟ್ ಮುಖ್ಯನ್ಯಾಯ ಮೂರ್ತಿ ಎನ್‌ವಿ ರಮಣ, “ಹೈಕೋರ್ಟ್ ಜಾಮೀನು ಅರ್ಜಿಯ ಹೊಸದಾಗಿ ತ್ವರಿತವಾಗಿ ಮತ್ತು ಮೂರು ತಿಂಗಳ ಅವಧಿಯೊಳಗೆ ನಿರ್ಧರಿಸುತ್ತದೆ” ಎಂದು ಹೇಳಿದ್ದಾರೆ.

2022 ರ ಫೆಬ್ರವರಿ 10 ರಂದು ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು ಮತ್ತು ವಿಷಯವನ್ನು ಹೈಕೋರ್ಟ್‌ಗೆ ಹಿಂತಿರುಗಿಸಿದೆ.