ಲಖೀಂಪುರ ಹಿಂಸಾಚಾರ :ತನಿಖೆಗೆ ಸುಪ್ರೀಂ ಸೂಚನೆ

ನವದೆಹಲಿ, ನ. ೮- ಲಖೀಂಪುರ ಹಿಂಸಾಚಾರ ಪ್ರಕರಣ ತನಿಖೆಯ ಮೇಲ್ವಿಚಾರಣೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರನ್ನು ನೇಮಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.
ಅ. ೩ ರಂದು ಲಖೀಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನಾಲ್ವರು ರೈತರನ್ನು ಹತ್ಯೆಗೈದ ಮತ್ತು ನಂತರ ನಾಲ್ವರನ್ನು ಹತ್ಯೆ ಮಾಡಿದ ಹಿಂಸಾಚಾರ ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಂiiಮೂರ್ತಿ ಎನ್.ವಿ. ರಮಣ ಮತ್ತು ನ್ಯಾಂiiಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಕೊಹ್ಲಿ ಅವರನ್ನೊಳಗೊಂಡ ಪೀಠ ಉತ್ತರಪ್ರದೇಶ ಸರ್ಕಾರ ಸಲ್ಲಿಸಿದ ವರದಿಯ ನಂತರ ಪ್ರಕರಣದ ಮೂರು ಬೇರೆ ಬೇರೆ ಎಫ್‌ಐಆರ್‌ಗಳಲ್ಲಿ ಉಲ್ಲೇಖಿಸಿರುವ ತನಿಖೆಯ ತೀವ್ರತೆ ಮತ್ತು ಸಾಕ್ಷಿಗಳ ಮಿಶ್ರಣದ ಕುರಿತಂತೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ.
ತನಿಖೆಗೆ ಸ್ವಾತಂತ್ರ ಮತ್ತು ನಿಸ್ಪಕ್ಷಪಾತ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಉತ್ತರಪ್ರದೇಶ ರಾಜ್ಯದ ಹೊರಗಿನ ಇಬ್ಬರು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಹೆಸರನ್ನು ಸುಪ್ರೀಂಕೋರ್ಟ್ ಸೂಚಿಸಿದೆ. ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಹೊರತುಪಡಿಸಿ, ಘಟನೆಯ ಎಲ್ಲಾ ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಏಕೆ ವಶಪಡಿಸಿಕೊಂಡಿಲ್ಲ ಎಂದು ನ್ಯಾಯಾಲಯ, ರಾಜ್ಯದ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು.
ಇತರ ಆರೋಪಿಗಳು ಮೊಬೈಲ್ ಫೋನ್‌ಗಳನ್ನು ಬಳಸಿರಲಿಲ್ಲವೆ. ಈ ಪ್ರಕರಣದ ತನಿಖೆ ವೇಗ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಪೀಠ ಪ್ರಶ್ನಿಸಿದೆ ಹಾಗೂ ಸ್ಥಿತಿ ವರದಿಯಲ್ಲಿ ಮಾಹಿತಿ ಕೊರತೆಯನ್ನು ನ್ಯಾಯಾಲಯ ತಿಳಿಸಿದೆ.
ನ್ಯಾಯಾಲಯ ೧೦ ದಿನಗಳ ಕಾಲಾವಕಾಶವನ್ನು ನೀಡಿದ್ದರೂ ಸಹ ಲ್ಯಾಬ್ ವರದಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ವರದಿಗಳು ಎಲ್ಲಿವೆ, ಏನು ಎಂದು ಪೀಠ ಪ್ರಶ್ನಿಸಿದೆ.
ಉತ್ತರಪ್ರದೇಶ ಸರ್ಕಾರ ಪರ ವಾದ ಮಂಡಿಸಿರುವ ಹಿರಿಯ ವಕೀಲ ಹರೀಶ್ ಸಾಳ್ವೆ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸಲಹೆ ಹಾಗೂ ಸೂಚನೆಯನ್ನು ಪಡೆದುಕೊಳ್ಳಲು ಸಮಯಾವಕಾಶ ನೀಡುವಂತೆ ಮನವಿ ಮಾಡಿದೆ.
ಘಟನೆ ಸ್ವತಂತ್ರ ತನಿಖೆಗಾಗಿ ವಕೀಲ ಶಿವಕುಮಾರ್ ತ್ರಿಪಾಠಿ, ಮತ್ತೋರ್ವ ವಕೀಲರು ಬರೆದಿದ್ದ ಪತ್ರದಿಂದ ಉದ್ಭವಿಸಿರುವ ವಿಷಯವನ್ನು ಪೀಠ ಪರಿಗಣಿಸಿದೆ. ಅ. ೩ ರಂದು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭಾಗವಹಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಲು ಜಮಾಯಿಸಿದ್ದ ಪ್ರತಿಭಟನಾಕಾರರ ಗುಂಪಿನ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕರೆದೊಯ್ಯುತ್ತಿದ್ದ ಕಾರೊಂದು ಹರಿದ ಪರಿಣಾಮದಿಂದ ನಾಲ್ವರು ರೈತರು ಸೇರಿದಂತೆ ೮ ಜನ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ಪುತ್ರ ಆಶೀಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.