ಸಂಜೆವಾಣಿ ವಾರ್ತೆ,
ಮರಿಯಮ್ಮನಹಳ್ಳಿ, ಮಾ.29: ಮರಿಯಮ್ಮನಹಳ್ಳಿಗೆ ಸಮೀಪದ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿ ಗ್ರಾಮದಲ್ಲಿ ಲಘು ಭೂಕಂಪನವಾದ ವರದಿಯಾಗಿದೆ.
ಸ್ಥಳೀಯ ಕಂದಾಯ ಇಲಾಖೆಯಿಂದ ಈ ಕುರಿತು ಮಾಹಿತಿ ದೊರಕಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ಪ್ರಮಾಣ 2.9 ಆಗಿದೆ. 15ರಿಂದ 20 ಕಿಲೋ ಮೀಟರ್ ರೇಡಿಯಸ್ ವ್ಯಾಪ್ತಿಯಲ್ಲಿ ಭೂಕಂಪನದ ವರದಿಯಾಗಿದೆ.
ಕೂಡಲೇ ಗ್ರಾಮಕ್ಕೆ ಭೇಟಿ ನೀಡಿದ ಕಂದಾಯ ನಿರೀಕ್ಷಕರು ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.
ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ಕಂಪನದ ಅನುಭವ ಆಗಿಲ್ಲ ಅಲ್ಲದೇ ಯಾವುದೇ ತೊಂದರೆಯಾಗಿಲ್ಲ. ಭೂಮಿ ಸಣ್ಣ ಪ್ರಮಾಣದಲ್ಲಿ ಕಂಪಿಸಿದ ಅನುಭವವಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದಂತೆ ಪಟ್ಟಣದ ಕಂದಾಯ ನಿರೀಕ್ಷಕ ಅಂದಾನಗೌಡರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಲೇಶ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.