ಲವ್ ಜಿಹಾದ್‍ಗೆ ಪ್ರತ್ಯೇಕ ಕಾಯಿದೆ ರೂಪಿಸಿ: ಪ್ರಮೋದ್ ಮುತಾಲಿಕ್

ಮೈಸೂರು: ನ.24:- ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕೆಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಮೈಸೂರಿಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು 3 ಸಾವಿರ ಹೆಣ್ಣು ಮಕ್ಕಳನ್ನ ಲವ್ ಜಿಹಾದ್ ನಿಂದ ನಾವು ಪಾರು ಮಾಡಿದ್ದೇವೆ ಎಂದರು.
ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ, ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿ ಮಾಡಬೇಕು. ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ. ನಿಮ್ಮ ಜತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ. ಲವ್ ಜಿಹಾದ್ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು. ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಬೈಯುತ್ತಿಲ್ಲ.
ನಾನು ಎಂದೂ ಬಿಜೆಪಿ ಪರವಾಗಿ ಮಾತನಾಡಿಲ್ಲ. ಬಿಜೆಪಿ ಪರವಾಗಿ ಸಾಫ್ಟ್ ಕರ್ನರ್ ತೋರಿಲ್ಲ. ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಬೈದವನು ನಾನು. ಬಿಜೆಪಿ ಯನ್ನ ಮೊದಲಿನಿಂದಲೂ ಟೀಕಿಸುತ್ತಾ ಬಂದಿದ್ದೇನೆ.ಕೇವಲ ಹಿಂದುತ್ವದ ವಿಚಾರವಾಗಿ ಗಟ್ಟಿ ಧ್ವನಿಯಲ್ಲಿ ಮಾತಾಡುತ್ತಿದ್ದೀನಿ ಎಂದು ಹೇಳಿದರು.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ.
ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿ, ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ ಎಂದರು.
ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ ಧರಿಸಿದ ವಿಚಾರವಾಗಿ ಮಾತನಾಡಿ,
ಉಗ್ರಗಾಮಿಗಳು ತಾವು ಮಾಡುವ ಕೃತ್ಯಗಳನ್ನ ಹಿಂದೂಗಳ ಮೇಲೆ ಹಾಕಲು ಈ ಕುತಂತ್ರ ಮಾಡುತ್ತಿದ್ದಾರೆ. ಹಿಂದೂಗಳು ಯಾವತ್ತೂ ಭಯೋತ್ಪಾದನಾ ಚಟುವಟಿಕೆ ಮಾಡಲ್ಲ. ಭಾರತದಲ್ಲಿ ಮಾತ್ರ ಅಲ್ಲ,ಇಡೀ ವಿಶ್ವದಲ್ಲೇ ಜಗಜ್ಜಾಹೀರಾಗಿರೋದು ಇಸ್ಲಾಂ ಭಯೋತ್ಪಾದನೆ ಮಾತ್ರ. ಹಾಗಾಗಿ ಇಸ್ಲಾಮಿಕ್ ಭಯೋತ್ಪಾದನೆ ಮಟ್ಟ ಹಾಕಬೇಕು ಎಂದು ಹೇಳಿದರು.
ಹಿಂದೂ ಬಾಹುಳ್ಯ ಪ್ರದೇಶದಲ್ಲಿ ಯಾವ ಗೊಂದಲ, ಸಮಸ್ಯೆಗಳು ಇರಲ್ಲ. ಮುಸ್ಲಿಂ ಬಾಹುಳ್ಯ ಪ್ರದೇಶವನ್ನ ಸೂಕ್ಷ್ಮ ಪ್ರದೇಶ ಅನ್ನೋದು
ಮುಸ್ಲಿಂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಂದ್ರೆ ಅಲ್ಲಿ ಎಲ್ಲಾ ರೀತಿಯ ಅಕ್ರಮ ಚಟುವಟಿಕೆಗಳಿವೆ ಎಂದರ್ಥ. ಅದೇ ಕಾರಣಕ್ಕೆ ಮುಸ್ಲೀಮರು ಅತೀ ಹೆಚ್ಚಿರೋ ಪ್ರದೇಶನವನ್ನು ಸೂಕ್ಷ್ಮ ಪ್ರದೇಶ ಅಂತಾರೆ ಎಂದರು.