ಲವ್ ಜಿಹಾದ್ ಎಸ್‌ಐಟಿ ರಚನೆಗೆ ಆಗ್ರಹ


ಹುಬ್ಬಳ್ಳಿ, ಮೇ ೪: ಕಳೆದ ಒಂದೂವರೆ ತಿಂಗಳಲ್ಲಿ ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯಲ್ಲಿ ಹಾಗೂ ವಿವಿಧೆಡೆ ಲವ್ ಜಿಹಾದ್ ಶಂಕೆ ಇರುವ ಪ್ರಕರಣಗಳು ದಾಖಲಾಗಿದ್ದು, ಈ ಎಲ್ಲ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಆಗ್ರಹಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕೇರಳದಲ್ಲಿ ಇಂಥ ಪ್ರಕರಣಗಳು ಹೆಚ್ಚಾದಾಗ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ಕೈಗೊಂಡಿತ್ತು. ಅಲ್ಲಿಯ ನ್ಯಾಯಾಲಯವೂ ಪ್ರಕರಣಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತ್ತು ಎಂದು ಹೇಳಿದರು.
ಹಿಂದೂ ಯುವತಿಯನ್ನು ಮುಸ್ಲಿಂ ಯುವಕರು ಪ್ರೀತಿಸಿ ಲವ್ ಜಿಹಾದ್ ಮಾಡುತ್ತಿದ್ದಾರೆ. ಹೆಣ್ಣುಮಕ್ಕಳ ಜೀವನ ಹಾಳು ಮಾಡಿ, ಕುಟುಂಬದ ನೆಮ್ಮದಿ ಕೆಡಿಸುತ್ತಿದ್ದಾರೆ. ಪ್ರೀತಿಯ ನೆಪದಲ್ಲಿ ಮೋಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಆಗ್ರಹಿಸಿದರು.