ಲವ್ ಜಿಹಾದ್ ತಡೆಗೆ ಕಾನೂನು : ಬೊಮ್ಮಾಯಿ

ಬೆಂಗಳೂರು,ನ.೪- ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಶೀಘ್ರ ಕಾನೂನು ಜಾರಿಗೊಳಿಸುವ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗುವುದು ಎಂದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಲವ್ ಜಿಹಾದ್ ತಡೆಗೆ ಬೇರೆ ಬೇರೆ ರಾಜ್ಯಗಳ ನಿರ್ಧಾರಗಳ ಆಧರಿಸಿ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ಮುಖ್ಯ ಮಂತ್ರಿಗಳ ಜೊತೆ ಮಾತುಕತೆ ನಡೆಸಿದ ನಂತರ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದರು.
ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಮೆಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ
ನಿವೃತ್ತ ಡಿಐಜಿಪಿ ಡಾ.ಡಿ.ಸಿ.ರಾಜಪ್ಪ ಅವರ ಸಂಪಾದಕತ್ವದಲ್ಲಿ ಪ್ರಕಟಗೊಳ್ಳುತ್ತಿರುವ ಪೊಲೀಸ್ ಲಹರಿ ಮಾಸ ಪತ್ರಿಕೆಯನ್ನು ಬಿಡುಗಡೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿತಪ್ಪಿಸುವ ಕಾರ್ಯಾಚರಣೆ ಮಾಡ್ತಿವೆ. ಲವ್ ಜಿಹಾದ್ ಹೆಸರಿನಿಂದ ಪರಿವರ್ತನೆ ಸರಿಯಲ್ಲ ಎಂದು ಅಹಮದಾಬಾದ್ ಹೈಕೋರ್ಟ್ ಕೂಡಾ ಹೇಳಿದೆ
ಇದೇ ವಿಚಾರವಾಗಿ ದೇಶದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ ಈಗಿರುವ ಕಾನೂನು ಅಲ್ಲದೇ ವಿಶೇಷ ಕಾನೂನು ಆಗಬೇಕು ಅಂತಾ ಕೆಲವರು ಚಿಂತನೆ ಆರಂಭಿಸಿದ್ದಾರೆ ಕೆಲವು ರಾಜ್ಯಗಳು ಘೋಷಣೆ ಕೂಡಾ ಮಾಡಿವೆ ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ರಚನೆಯಾಗಬೇಕೆಂಬ ಚಿಂತನೆ ಕೂಡಾ ನಮ್ಮ ಸರ್ಕಾರದಲ್ಲಿ ಇದೆ.
ಬೇರೆ ರಾಜ್ಯಗಳಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಕಾನೂನು ತಜ್ಞರ ಜೊತೆ ಕೂಡಾ ಚರ್ಚೆ ಮಾಡುತ್ತೇವೆ ಎಲ್ಲಾ ಸಲಹೆ ಸೂಚನೆ ಆಧಾರದಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ಪ್ರಕ್ರಿಯೆಗೆ ಸರ್ಕಾರ ಮುಂದುವರಿಯಲಿದೆ ಎಂದರು.
ದೇಶದಲ್ಲಿ ಎಂಟು ಹತ್ತು ವರ್ಷಗಳಿಂದ ಈ ಚರ್ಚೆ ಇದೆ ಪ್ರತೀ ಪ್ರಕರಣ ಆದಾಗಲೂ ಇದು ಚರ್ಚೆಗೆ ಬರುತ್ತದೆ ಈಗ ಹೈಕೋರ್ಟ್ ವ್ಯಾಖ್ಯಾನದ ಬಳಿಕ ಕಾನೂನು ಪ್ರಕ್ರಿಯೆಯ ಚಿಂತನೆ ಆರಂಭವಾಗಿದೆ ಬೇರೆ ರಾಜ್ಯಗಳಲ್ಲಿ ಏನೇನು ಮಾಡುತ್ತಾರೆ ಎಂಬುದನ್ನು ನೋಡಿಕೊಂಡು ನಂತರ ನಾವು ನಮ್ಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.