ಲವ್ ವಿರುದ್ದ ಅಲ್ಲ ಜಿಹಾದ್ ಗೆ ತಕರಾರು: ಶಿವರಾಜ್ ಸಿಂಗ್ ಚೌಹ್ಹಾಣ್

ಗುವಹಟಿ,ಮಾ. 25- ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತ್ತೊಮ್ಮೆ ಲವ್ ಜಿಹಾದ್ ಸದ್ದು ಮಾಡುತ್ತಿದೆ.

ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ಪಕ್ಷ ಯಾವತ್ತು ಪ್ರೀತಿಗೆ ವಿರುದ್ದ ಇಲ್ಲ ಬದಲಾಗಿ ಜಿಹಾದ್ ಗೆ ನಮ್ಮ ತಕರಾರಿದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂ ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ನಿರತರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಈ ಕುರಿತು ಪ್ರತಿಕ್ರಿಯೆ ನೀಡಿ ಪ್ರೀತಿಯ ಹೆಸರಲ್ಲಿ ವಂಚನೆ ಮಾಡುವುದಕ್ಕರ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ತಡೆಗೆ ಕಾನೂನು ಜಾರಿ ಮಾಡಲಾಗಿ್ದೆದೆ ಅದೇ ರೀತಿ ಮತ್ತೊಮ್ಮೆ ಅಸ್ಸಾಂನಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಈ ಮಾದರಿಯ ಕಾನೂನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.

ಮದುವೆಯ ಹೆಸರಲ್ಲಿ ಹಿಂದು ಸಮುದಾಯದ ಯುವತಿಯರನ್ನು ಮುಸ್ಲಿಂ ಸಮುದಾಯದ ಯುವಕರು ಮದುವೆಯಾಗುವುದನ್ನು ತಡೆಯಲು ರೂಪಿಸಿರುವ ಕಾನೂನು ಲವ್ ಜಿಹಾದ್ ಎಂದು ಅವರು ಹೇಳಿದ್ದಾರೆ.

ಹಿಂದೂ ಯುವತಿಯರನ್ನು ಮದುವೆ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುವುದಕ್ಕೆ ಯಾವತ್ತೂ ಅವಕಾಶ ಮಾಡಿಕೊಡುವುದಿಲ್ಲ ಹೀಗಾಗಿ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.

ಮಧ್ಯಪ್ರದೇಶದಲ್ಲಿ ಯಾರಾದರೂ ಲವ್ ಜಿಹಾದ್ ಉಲ್ಲಂಘಿಸಿದರೆ ಅಂತವರಿಗೆ ಹತ್ತು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಲಾಗಿದೆ ಇಂತಹುದೇ ಕಾನೂನು ಅಸ್ಸಾಂ ನಲ್ಲಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ