ಲಸಿಕಾ ಅಭಿಯಾನಕ್ಕೆ ಚಾಲನೆ

ಬೀದರ್,ಮೇ.28-ನಗರದ ನೆಹರು ಕ್ರೀಡಾಂಗಣದ ಹತ್ತಿರದಲ್ಲಿರುವ ನ್ಯಾಷನಲ್ ಸ್ಕೂಲ್ ಅವರಣದಲ್ಲಿ ಇಂದು ನಗರ ಸಭೆ ಸದಸ್ಯ ಚಂದ್ರಶೇಖರ ಪಾಟಿಲ ಅವರಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಮೂಲಕ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
17ನೇ ವಾರ್ಡ್ ನಲ್ಲಿ ಸುಮಾರು 200 ಜನರಿಗೆ ಇಂದು ಕೋವಿಡ್ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಹಾಗೂ ಇತರರಿದ್ದರು.