ಲಸಿಕಾ ಕೇಂದ್ರಗಳಿಗೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಭೇಟಿ

ಹೊಸಪೇಟೆ(ವಿಜಯನಗರ),ಸೆ.18 :  ಹೊಸಪೇಟೆಯಲ್ಲಿ ಸರ್ಕಾರದ ನಿರ್ದೇಶನದಂತೆ ಇಂದು ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದ ನಿಮಿತ್ತ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಕೊರೋನ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ, ನೋಡಲ್ ಅಧಿಕಾರಿಗಳಿಗೂ ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ಸೂಕ್ತ ನಿರ್ದೇಶನ ನೀಡಿದರು.