ಲಸಿಕಾ ಕೇಂದ್ರಗಳಿಗೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಭೇಟಿ

ಸಂಜೆವಾಣಿ ವಾರ್ತೆ
ಹೊಸಪೇಟೆ ಸೆ.17 ಹೊಸಪೇಟೆಯಲ್ಲಿ ಸರ್ಕಾರದ ನಿರ್ದೇಶನದಂತೆ ಇಂದು ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದ ನಿಮಿತ್ತ ವಿವಿಧ ಲಸಿಕಾ ಕೇಂದ್ರಗಳಿಗೆ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಭೇಟಿ ನೀಡಿ ಪರಿಶೀಲಿಸಿದರು.
ಕೊರೋನ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿ, ನೋಡಲ್ ಅಧಿಕಾರಿಗಳಿಗೂ ಹಾಗೂ ವೈದ್ಯಕೀಯ ಸಿಬ್ಬಂದಿ ವರ್ಗದವರಿಗೆ ಸೂಕ್ತ ನಿರ್ದೇಶನ ನೀಡಿದರು. ಬಸ್‍ನಿಲ್ದಾಣ, ಸರ್ಕಾರಿ ಶಾಲೆಗಳು, ದೇವಸ್ಥಾನ, ಉದ್ಯಾನವನಗಳು ಹಾಗೂ ತರಕಾರಿ ಮಾರುಕಟ್ಟೆ ಸೇರಿದಂತೆ ವಿವಿಧ ಜನನಿಭಿಡ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.  ಹೊಸಪೇಟೆ ತಾಲೂಕಿನಾದ್ಯಂತ ಲಸಿಕಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರೀಯೆ ವ್ಯಕ್ತವಾಗಿದ್ದು ಬಹುತೇಕ ಯಶಸ್ವಿಯಾಗಿದೆ.