ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಿದ ಶಾಸಕರು

ಹೊನ್ನಾಳಿ.ಜೂ.೬: ಕೊರೊನಾ ಲಸಿಕೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದ್ದು, ಕೆಲವರು ಅಪಪ್ರಚಾರ ಮಾಡುತ್ತಿದ್ದು ಯಾರೂ ಕೂಡ ಇದಕ್ಕೆ ಕಿವಿಗೊಡದೇ ಸಾರ್ವಜನಿಕರು ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಅವಳಿ ತಾಲೂಕಿನ ಅರಬಗಟ್ಟೆ,ಕುಂಕುವಾ,ಸುರಹೊನ್ನೆ,ಚಟ್ನಳ್ಳಿ, ಸೇರಿದಂತೆ ವಿವಿಧ ಗ್ರಾಮಗಳ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆಯ ಬಗ್ಗೆ ಮಾಹಿತಿ ಪಡೆದು, ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.ಸರ್ಕಾರದಿಂದ ಸಾರ್ವಜನಿಕರಿಗೆ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದು ಯಾರೂ ಕೂಡ ಲಸಿಕೆಗಳನ್ನ ನೀಡಿಲ್ಲಾ, ಕೆಲವರು ವಿನಾಃ ಕಾರಣ ಅಪಪ್ರಚಾರ ಮಾಡುತ್ತಿದ್ದು ಇದಕ್ಕೆ ಯಾರೂ ಕಿವಿಗೊಡದೇ, ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಹಾಕಿಸಿಕೊಳ್ಳುವಂತೆ ಕಿವಿ ಮಾತು ಹೇಳಿದರು.ಪ್ರತಿಯೊಬ್ಬರಿಗೆ ಲಸಿಕೆ ಸಿಗ ಬೇಕೆಂದು ಮುಖ್ಯಮಂತ್ರಿಗಳು ಸಂಕಲ್ಪ ಮಾಡಿದ್ದು ಲಸಿಕೆಗಳನ್ನು ಉಚಿತವಾಗಿ ನೀಡುವ ಕೆಲಸ ಮಾಡುತ್ತಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
45 ವರ್ಷ ಮೇಲ್ಟವರಿಗೆ ಲಸಿಕೆ ಹಾಕಿಸುತ್ತಿದ್ದು, 18 ವರ್ಷ ಮೇಲ್ಪಟ್ಟವರಿಗೆ ಇನ್ನು ಕೆಲವೇ ದಿನಗಳಲ್ಲಿ ಲಸಿಕೆ ಬರಲಿದ್ದು ಅವರಿಗೂ ಲಸಿಕೆ ಹಾಕಲಾಗುವುದು ಎಂದ ಶಾಸಕರು, ಯುವಕರು ಸಹಕರಿಸುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಪುರಸಭಾಧ್ಯಕ್ಷ ಕೆ.ವಿ.ಶ್ರೀಧರ್, ಮುಖಂಡರಾದ ನೆಲವೊನ್ನೆ ಮಂಜುನಾಥ್,ಪಲ್ಲವಿರಾಜು, ವಡ್ಡಾ ಸುರೇಶ್ ಸೇರಿದಂತೆ ಮತ್ತೀತತರಿದ್ದರು.