ಲಸಿಕೆ ಖರೀದಿ ಅನುಮತಿಗೆ ಮನವಿ

ಬೆಂಗಳೂರು,ಜೂ. ೭- ಕಾಂಗ್ರೆಸ್ ಪಕ್ಷಕ್ಕೆ ನೇರವಾಗಿ ಕಂಪನಿಗಳಿಂದ ಲಸಿಕೆಗಳನ್ನು ಖರೀದಿಸಲು ಅನುಮತಿ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕರ್ನಾಟಕದ ಯುವ ಶಕ್ತಿಗೆ ಕಾರ್ಯನಿರತ ಎಲ್ಲ ಜನರಿಗೆ ಉಚಿತವಾಗಿ ಲಸಿಕೆ ದೊರೆಯುವುದನ್ನು ಕಾಂಗ್ರೆಸ್ ಪಕ್ಷ ನೋಡಬಯಸುತ್ತದೆ ಎಂದು ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಎಲ್ಲರಿಗೂ ಲಸಿಕೆ ನೀಡಲು ಅನುಕೂಲವಾಗುವಂತೆ ಕಾಂಗ್ರೆಸ್ ಪಕ್ಷಕ್ಕೆ ನೇರವಾಗಿ ಕಂಪನಿಗಳಿಂದ ಲಸಿಕೆಗಳನ್ನು ಖರೀದಿಸಲು ಅನುಮತಿ ನೀಡುವಂತೆ ಸರ್ಕಾರದ ಬಳಿ ಪುನಃ ಕೇಳಿಕೊಳ್ಳುತ್ತಿದ್ದೇನೆ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಲಸಿಕೆ ನೀಡಿಕೆ ಮಂದಗತಿಯಲ್ಲಿ ನಡೆದಿದೆ. ಸರ್ಕಾರ ಅನುಮತಿ ನೀಡಿದರೆ ಕಾಂಗ್ರೆಸ್ ಪಕ್ಷ ಸಹ ಎಲ್ಲ ಜನರಿಗೂ ಉಚಿತ ಲಸಿಕೆ ನೀಡುವ ಕಾರ್ಯಕ್ರಮ ನಡೆಸಲು ಸಿದ್ಧ ಎಂದು ಡಿ.ಕೆ. ಶಿವಕುಮಾರ್ ನಿನ್ನೆ ಹೇಳಿಕೆ ನೀಡಿದ್ದರ ಬೆನ್ನಲ್ಲೆ ಇಂದು ಲಸಿಕೆ ಖರೀದಿಗೆ ಸನುಮತಿ ನೀಡಿದೆ ಎಂದು ಸರ್ಕಾರವನ್ನು ಕೋರಿದ್ದಾರೆ.