ಲಸಿಕೆ ನೀಡಿಕೆ ಭಾರತದ ದಾಖಲೆ

ಬೆಂಗಳೂರು, ಡಿ.೧೨-ಕೊರೋನಾ ವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದ್ದು, ಕಳೆದ ೨೪ ಗಂಟೆಂಯಲ್ಲಿ ೧೩೦ ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ ೩೩೧ ದಿನಗಳಾಗಿದ್ದು, ಬುಧವಾರದ ಅಂಕಿ-ಅಂಶಗಳ ಪ್ರಕಾರ, ಒಂದೇ ದಿನ ೭೨ ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ ಒಟ್ಟು ೧,೩೦,೩೯,೩೨,೨೮೬ ಜನರಿಗೆ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಭಾರತ ಕೊವಿಡ್-೧೯ ಲಸಿಕೆ ವಿತರಣೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ.

ಕಳೆದ ಜನವರಿ ೧೬ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ ೧ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ ೪೫ ವರ್ಷ ಮೇಲ್ಪಟ್ಟ ಹಾಗೂ ೬೦ ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ ೧ರಂದು ಮೂರನೇ ಹಂತದಲ್ಲಿ ೪೫ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ ೨೧ರಿಂದ ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.