ಲಸಿಕೆ ನೀಡಿ ಪರೀಕ್ಷೆಗೆ ತಜ್ಞರು ಸಲಹೆ


ಬೆಂಗಳೂರು.ಮೇ೩೧:ಕೊರೋನಾ ಸೋಂಕಿನ ಭೀತಿಯಿಂದಾಗಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಪರೀಕ್ಷೆ ನಡೆಯುತ್ತೋ ಅಥವಾ ಕ್ಯಾನ್ಸಲ್ ಆಗುತ್ತೋ ಎನ್ನುವ ಗೊಂದಲದಲ್ಲಿ ವಿದ್ಯಾರ್ಥಿಗಳಿದ್ದಾರೆ. ಇದರ ಮಧ್ಯೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಏನ್ ಹೇಳಿದ್ರು ಅಂತ ಮುಂದೆ ಓದಿ..
ರಾಜ್ಯದಲ್ಲಿ ಕೊರೋನಾ ಸೋಂಕಿನ ೨ನೇ ಅಲೆಯ ಆರ್ಭಟ ಜೋರಾಗಿದೆ. ಕೊರೋನಾ ಅಲೆಯ ವ್ಯಾಪಕತೆಯಿಂದಾಗಿ ಈಗಾಗಲೇ ನಡೆಯಬೇಕಿದ್ದಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಮುಂದೂಡಲಾಗಿದೆ. ಈ ಪರೀಕ್ಷೆ ನಡೆಯುತ್ತೋ ಇಲ್ಲವೋ ಎನ್ನುವ ಗೊಂದಲದಲ್ಲಿ ವಿದ್ಯಾರ್ಥಿಗಳು ಇದ್ದಾರೆ. ಇದರ ಮಧ್ಯೆಯೂ ತಜ್ಞರ ಅಭಿಪ್ರಾಯಗಳೊಂದಿಗೆ ದ್ವಿತೀಯ ಪರೀಕ್ಷೆ ನಡೆಸೋ ಬಗ್ಗೆ ಶಿಕ್ಷಣ ಸಚಿವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆ ಮುಂದೂಡಲಾಗಿದೆ. ಆದ್ರೇ ಸೋಂಕಿನ ಭೀತಿಯ ನಡುವೆಯೂ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಮೂಲಕ, ಪರೀಕ್ಷೆ ನಡೆಸಲು ತಜ್ಞ ವೈದ್ಯರು ಸಲಹೆ ಮಾಡಿದ್ದಾರೆ ಎಂದು ಹೇಳಿದರು.
ಹಿರಿಯ ವೈದ್ಯ ಗಿರಿಧರ್ ಬಾಬು ಅವರು, ಮಕ್ಕಳಿಗೆ ಕೊರೋನಾ ಲಸಿಕೆ ನೀಡುವಂತೆ ಸಲಹೆ ಮಾಡಿದ್ದಾರೆ. ಕೊರೋನಾ ಲಸಿಕೆ ಪಡೆದ ನಂತ್ರ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತೆ ಸಲಹೆ ನೀಡಿದ್ದಾರೆ. ಆದ್ರೇ.. ಸರ್ಕಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವ ಕುರಿತಂತೆ ಇಲ್ಲಿಯವರೆಗೆ ಯಾವುದೇ ಚರ್ಚೆ ನಡೆಸಿಲ್ಲ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಸದ್ಯಕ್ಕೆ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.