ಲಸಿಕೆ ಪಡೆದ ಉಸ್ತುವಾರಿ ಸಚಿವ

ಕೆ.ಆರ್.ಪೇಟೆ. ಮಾ.23: ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ದಂಪತಿಗಳು ಪಟ್ಟಣದ ದುಂಡಶೆಟ್ಟಿಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂಧನ್, ಫಾರ್ಮಸಿ ಅಧಿಕಾರಿ ಸತೀಶ್ ಬಾಬು ಸೇರಿದಂತೆ ಹಲವರು ಹಾಜರಿದ್ದರು.