ಲಸಿಕೆ ಪಡೆದ ವಾರ್ತಾ ಸಚಿವ ಸಿ.ಸಿ.ಪಾಟೀಲ

ಗದಗ ಏ.21 :ಗದಗ ಜಿಲ್ಲೆಯ ನರಗುಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡನೇ ಹಂತದ ಕೊರೋನಾ ಲಸಿಕೆ (ಕೋವಿಶೀಲ್ಡ್) ಯನ್ನು ರಾಜ್ಯ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಪಡೆದರು.
ಕೊರೋನಾ ಲಸಿಕೆ ಸುರಕ್ಷಿತವಾಗಿದ್ದು, ಸರ್ಕಾರದ ನಿಯಮಾವಳಿ ಪ್ರಕಾರ 45 ವರ್ಷದ ಮೇಲ್ಪಟ್ಟ ನಾಗರಿಕರೆಲ್ಲ ಲಸಿಕೆ ಹಾಕಿಸಿಕೊಳ್ಳಬೇಕು.
ಸರ್ಕಾರದ ವೈದ್ಯಕೀಯ ವ್ಯವಸ್ಥೆಯಲ್ಲಿ ಕೊರೋನಾ ಲಸಿಕೆಯ ಅಗತ್ಯ ದಾಸ್ತಾನು ಲಭ್ಯವಿದೆ. ಸಾರ್ವಜನಿಕರು ಲಸಿಕೆ ಪಡೆಯಲು ಭಯಪಡಬೇಕಾಗಿಲ್ಲ.
ಕೊರೋನಾ ಲಸಿಕೆಯ ಜೊತೆಗೆ ಸರ್ಕಾರಿ ಕೋವಿಡ್ ಸುರಕ್ಷತಾ ನಿಯಮಗಳ ಪ್ರಕಾರ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ, ಸುರಕ್ಷಿತವಾಗಿರಿ ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.