ಲಸಿಕೆ: ಶೇ 50 ರಷ್ಟು ಗುರಿ ಸಾಧನೆ

ಭಾಲ್ಕಿ:ಮೇ.27: ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಕೋವಿಡ್ ಲಸಿಕಾ ಕೇಂದ್ರಕ್ಕೆ ಮಂಗಳವಾರ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

45 ವರ್ಷ ಮೇಲ್ಪಟ್ಟ ಹಾಗೂ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗುತ್ತಿರುವ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಅವರು, ‘ತಾಲ್ಲೂಕಿನಲ್ಲಿ ಜನ ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿರುವುದು ಸಂತಸ ತಂದಿದೆ. ಲಸಿಕೆ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಎಲ್ಲರಿಗೂ ಹಂತ ಹಂತವಾಗಿ ಲಸಿಕೆ ಸಿಗಲಿದೆ. ಸದ್ಯ 45ರಿಂದ 59 ವರ್ಷದವರೆಗೆ ಸುಮಾರು 1 ಲಕ್ಷ ಜನರಿಗೆ ಲಸಿಕೆ ನೀಡುವ
ಗುರಿ ಹೊಂದಲಾಗಿದೆ’ ಎಂದರು.

‘ಈಗಾಗಲೇ ಶೇ 50ರಷ್ಟು ಗುರಿ ಸಾಧನೆ ಆಗಿದೆ. ಜತೆಗೆ ಸುಮಾರು 800 ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗಿದೆ.ಶೀಘ್ರವೇ ನಿಗದಿತ ಗುರಿ ಸಾಧನೆ ಆಗಲಿದೆ’ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಅಬ್ದುಲ್ ಖಾದರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನಿರಗುಡೆ, ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಇದ್ದರು.