ಲಸಿಕೆ ಸುಳ್ಳ ಸಿದ್ದಿಗಳಿಗೆ ಕಿವಿಕೊಡದಿರಲು ಸಲಹೆ

ಕೋಲಾರ,ಏ.೪: ಕೋವಿಡ್ ಲಸಿಕೆ ಬಗ್ಗೆಯ ಊಹಾ ಪೊಹಗಳಿಗೆ ಕಿವಿಗೊಡದೇ ೪೫ ವರ್ಷ ತುಂಬಿದ ಪ್ರತಿಯೊಬ್ಬರು ನಿರ್ಭೀತಿಯಿಂದ ಲಸಿಕೆ ಹಾಕಿಸಿಕೊಳ್ಳಿ ಎಂದು ವಕ್ಕಲೇರಿ ಗ್ರಾಪಂ ಅಧ್ಯಕ್ಷ ಮೈಲಾಂಡಹಳ್ಳಿ ಎನ್.ಮುರಳಿ ಮನವಿ ಮಾಡಿದರು.
ತಾಲೂಕಿನ ವಕ್ಕಲೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರುಗಂಜಿಗುರ್ಕಿ ಗ್ರಾಮದಲ್ಲಿ ನಡೆದ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೆಳದ ವರ್ಷದ ದಂತೆ ಈ ವರ್ಷವು ಬಹಳ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಜೊತೆಗೆ ಲಸಿಕೆಯನ್ನು ಪಡೆಯಬೇಕು ಎಂದರು. ಸರಕಾರ ಶಾಶ್ವತವಾಗಿ ಕೋವಿಡ್ ನಿಯಂತ್ರಣಕ್ಕೆ ಅನೇಕ ಮಾರ್ಗಸೂಚಿಗಳನ್ನು ತಂದಿದೆ. ಅವುಗಳನ್ನು ಜಾರಿ ಮಾಡುವುದು ನಮ್ಮ ಜವಾಬ್ದಾರಿ ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ. ಜನಸಂದಣಿ ಇರುವೆಡೆ ಜಾಗರೂಕರಾಗಿರಿ. ಅಗತ್ಯವಿದ್ದರಷ್ಟೇ ಮನೆಯಿಂದ ಹೊರಗೆ ಹೋಗಿ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಗಾಳಿ ಮಾತಿಗೆ ಕಿವಿಗೊಡಬೇಡಿ. ಲಸಿಕೆ ಪಡೆಯಲು ಯಾವುದೇ ಹಿಂಜರಿಕೆ ಬೇಡ ವಕ್ಕಲೇರಿ ಪಂಚಾಯಿತಿಗೆ ಸೇರುವ ಎಲ್ಲಾ ಗ್ರಾಮಗಳಲ್ಲಿ ಪ್ರತಿದಿನ ಒಂದೊಂದು ಗ್ರಾಮದಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಮುಂದುವರಿಸಲಾಗುವುದು ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಅನಿತಾ ಮಂಜುನಾಥ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ನವೀನ್ ಹಾಗೂ ಆರೋಗ್ಯ ಸಿಬ್ಬಂದಿ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.