ಲಸಿಕೆ ಹಾಕಿಸಿಕೊಳ್ಳಲು ಟಾರ್ಗೇಟ್ ಅಸ್ಲಂ ಮನವಿ

ದಾವಣಗೆರೆ.ಜೂ.೬; ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ನಾಗಕರಿಕರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೊನಾದಿಂದ ಮುಕ್ತರಾಗುವಂತೆ ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಟಾರ್ಗೇಟ್ ಅಸ್ಲಂ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಕೋವಿಡ್ ಮಾರ್ಗಸೂಚಿಗಳನ್ನು ಹೊರಡಿಸುವ ಮೂಲಕ ಮುನ್ನೆಚ್ಚರಿಕೆ ನೀಡುತ್ತಿವೆ. ಆದರೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸದೆ ಆಲಕ್ಷö್ಯ ವಹಿಸುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚಳದ ಜೊತೆಗೆ ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆೆ. ಹೀಗಾಗಿ ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಲಸಿಕೆ ಪಡೆಯಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಅಲ್ಲದೇ ಮನೆಯಿಂದ ಹೊರಗಡೆ ಬಂದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.