ಲಾಕಡೌನ್ ನಿಯಮ ಪಾಲಿಸಲು ಹರ್ಷಾನಂದ ಗುತ್ತೇದಾರ ಕರೆ

ಆಳಂದ:ಎ.27:ಕೋರೋನಾ ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ಕೈಗೊಂಡಿರುವ ಲಾಕಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಬೇಕೆಂದು ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ಕರೆ ನೀಡಿದ್ದಾರೆ.

ಸೋಮವಾರ ಆಳಂದÀ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ 19 ವ್ಯಾಕ್ಸಿನ್ ಪಡೆದ ಬಳಿಕ ಮಾತನಾಡಿದ ಅವರು, ಕೋರೋನಾ ವೈರಸ್‍ನ ಎರಡನೇ ಅಲೆಯು ಭೀಕರವಾಗಿದ್ದು ಅದನ್ನು ಮೆಟ್ಟಿ ನಿಲ್ಲಲು ಮುಂಜಾಗೃತಾ ಕ್ರಮಗಳನ್ನು ಅಳವಡಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅವಶ್ಯಕವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಸುರಕ್ಷತಾ ಕ್ರಮಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಈ ಮೂಲಕ ಕೋರೋನಾ ಹಬ್ಬುವುದನ್ನು ತಡೆಯಲು ಎಲ್ಲರೂ ಶ್ರಮವಹಿಸಬೇಕು ಎಂದು ಕರೆ ನೀಡಿದ್ದಾರೆ.