ಲಾಕ್ಡೌನ್: ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಕ್ಕೆ

ಬೆಂಗಳೂರು, ಏ. 20- ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಬಗ್ಗೆ ಲಾಕ್ಡೌನ್ ಜಾರಿ ಬಗ್ಗೆ ಚರ್ಚೆಗಳು ನಡೆದಿದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲಾಕ್ಡೌನ್ ಆಗ್ರಹಿಸಿದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಜ್ಞರ ವರದಿಯಂತೆ ಕ್ರಮ ಕೈಗೊಳ್ಳಿ ಎಂದು ಸಲಹೆ ಮಾಡಿದ್ದಾರೆ ತಜ್ಞರ ವರದಿಯಲ್ಲಿ ಲಾಕ್ಡೌನ್ ಗೆ ಶಿಫಾರಸು ಮಾಡಲಾಗಿದೆ.
ರಾಜ್ಯಪಾಲರು ಸಹ ಸರ್ಕಾರ ಪರಿಸ್ಥಿತಿ ನೋಡಿಕೊಂಡು ಕಠಿಣ ತೀರ್ಮಾನ ಮಾಡುವಂತೆ ಸೂಚಿಸಿದ್ದಾರೆ.
ಅಂತಿಮವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಕ್ಕೆ ಎಲ್ಲವನ್ನು ಬಿಡಲಾಗಿದೆ.
ರಾಜಧಾನಿ ಕೊರೊನಾ ನಿಯಂತ್ರಣ ಸಂಬಂಧ ಸಂಬಂಧ ಸರ್ವಪಕ್ಷಗಳ ಮುಖಂಡರ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಇಂದು ನಡೆಸಲಾಯಿತು. ಎಲ್ಲಾ ಪಕ್ಷಗಳ ಮುಖಂಡರುಗಳು ವೀಡಿಯೋ ಕಾನ್ಫರೆನ್ಸ್ ಮೂಲಕವೇ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ವಿಡಿಯೋ ಮೂಲಕ ಪಾಲ್ಗೊಂಡು ಎಲ್ಲರ ಮಾತುಗಳನ್ನು ಆಲಿಸಿದರು.
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಗೆ ಸರಕಾರವೇ ಕಾರಣ. ಕೊರೊನಾ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳ ನಾಯಕರುಗಳು ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲಾಕ್ಡೌನ್ ಜಾರಿಗೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕಠಿಣ ಕ್ರಮ ಜಾರಿ ಮಾಡುವಂತೆ ಆಗ್ರಹಿಸಿ ತಜ್ಞರ ತೀರ್ಮಾನದಂತೆ ನಡೆದುಕೊಳ್ಳಿ ಎಂದು ಒತ್ತಾಯಿಸಿದರು.
ಹೆಚ್‌.ಡಿ.ಕುಮಾರಸ್ವಾಮಿಯವರು ಲಾಕ್‌ಡೌನ್ ಜಾರಿಗೆ ಸಲಹೆ ಮಾಡಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು 144 ಸೆಕ್ಷನ್ ಜಾರಿ ಮಾಡಿ ಸೋಂಕು ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೋಂಕು ಹೆಚ್ಚಿರುವ ಕಡೆ ವಾರಂತ್ಯ ಲಾಕ್‌ಡೌನ್ ಜಾರಿ ಮಾಡುವಂತೆ ಸಲಹೆ ಮಾಡಿದರು.

ಪ್ರತಿಪಕ್ಷಗಳ ನಾಯಕರ ಸಲಹೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಸಭೆಯಲ್ಲಿ ಭರವಸೆ ನೀಡಿದರರು.

ಅಂತಿಮವಾಗಿ ಪರಿಸ್ಥಿತಿಯನ್ನು ನೋಡಿಕೊಂಡು ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸಭೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನೀಡಿದೆ ಎಂದು ಹೇಳಲಾಗಿದೆ.