ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು, ಜೂ. ೧೦- ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುವಂತೆ ಮುಖ್ಯಮಂತ್ರಿ ಇಂದು ಆದೇಶಿಸಿದ್ದಾರೆ.
ಲಾಕ್ ಡೌನ್ ತೆರವು ಮಾಡುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸುಧೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 11 ಜಿಲ್ಲೆಗಳಲ್ಲಿ ಮತ್ತೆ
ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಹೇಳಿದರು.
ಮಂಡ್ಯ,
ಮೈಸೂರು,
ಹಾಸನ,
ಚಿಕ್ಕಮಗಳೂರು,
ಶಿವಮೊಗ್ಗ,
ದಾವಣಗೆರೆ,
ಕೊಡಗು,
ಚಾಮರಾಜನಾಗರ,
ದಕ್ಷಿಣ ಕನ್ನಡ ,
ಬೆಳಗಾವಿ ಹಾಗೂ
ಬೆಂಗಳೂರು ಗ್ರಾಮಾಂತರ

ಜಿಲ್ಲೆಗಳಲ್ಲಿ ಜೂನ್ 14ರಿಂದ ಒಂದು ವಾರ ಲಾಕ್ ಡೌನ್ ಮುಂದುವರಿಯಲಿದೆ. ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಹೇಳಿದರು.
ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿಲ್ಲ . ಆದೇ ರೀತಿ ಮೆಟ್ರೊ ರೈಲು ಸಂಚಾರಕ್ಕೂ ಅವಕಾ ಶ ನೀಡಲಾಗಿಲ್ಲ.
ಶುಕ್ರವಾರ ಏಳರಿಂದ ವಾರಾಂತ್ಯ ಲಾಕ್ ಡೌನ್ ಮುಂದುವರೆಸಲು ನಿರ್ಧರಿಸಲಾಗಿದೆ ಎಂದರು.
ಬಾರ್ ಗಳು ಮಧ್ಯಾನ್ದ ಎರಡು ಗಂಟೆಯವರೆಗೂ ತರೆಯಲು ಅವಕಾಶ ನೀಡಲಾಗಿದೆ.ಆದರೆ ಬಾರ್ ನಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶ ನಿರಾಕರಿಸಲಾಗಿದೆ.
19 ಜಿಲ್ಲೆಗಳಲ್ಲಿ ಜೂನ್ 14 ರ ಬೆಳಿಗ್ಗೆ ಆರು ಗಂಟೆಯಿಂದ ಅನ್ ಲಾಕ್ ಪ್ರಕ್ರಿಯೆ ಜಾರಿಗೆ ಬರಲಿದೆ.

  • ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ಕಲ್ಪಿಸಲಾಗಿದೆ.
  • ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
  • ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ಅದರಲ್ಲೂ ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನಿಡಲಾಗಿದೆ.
  • ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
  • ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
  • ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
  • ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.