ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ


ಬೆಂಗಳೂರು,ಮೇ.೨೮- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಸೋಂಕು ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂ.೭ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಎಲ್ಲ ಸಾಧ್ಯತೆಗಳಿವೆ.
ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ೧೪ದಿನಗಳ ಜನತಾ ಕರ್ಪ್ಯೂ ಮತ್ತು ಮತ್ತೆ ೧೪ ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಾಗಿದೆ. ಸದ್ಯ ಜೂ.೭ ತನಕ ಲಾಕ್ಡೌನ್ ಜಾರಿಯಲ್ಲಿದ್ದು ಅದನ್ನು ಮತ್ತೆ ವಿಸ್ತರಿಸಲು ಸರ್ಕಾರ ಮುಂದಾಗಿದೆ.
ಜೂನ್ ೭ ರವರೆಗೆ ಜಾರಿ ಯಲ್ಲಿರುವ ಲಾಕ್ ಡೌನ್ ಅವಧಿಯಲ್ಲಿ ಕೋರೋನಾ ಸೋಂಕು ಸಂಖ್ಯೆ ಇಳಿಮುಖವಾಗಿ ಸಕ್ರಿಯ ಪ್ರಕರಣಗಳು ಕಡಿಮೆಯಾಗದಿದ್ದರೆ ಅನಿವಾರ್ಯವಾಗಿ ಜೂನ್ ೭ ರ ಬಳಿಕ
ವೂ ಲಾಕ್ ಡೌನ್ ವಿಸ್ತರಣೆ ಅನಿವಾರ್ಯ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಲಾಕ್‌ಡೌನ್ ಸಮಯದಲ್ಲಿ ಸೋಂಕು ಸಂಖ್ಯೆ ಮತ್ತು ಸಕ್ರಿಯ ಪ್ರಕರಣ ಇಳಿಕೆಯಾಗುವ ನಿಟ್ಟಿನಲ್ಲಿ ಸರ್ಕಾರ ಬಿಗಿ ಕ್ರಮ ಕೈಗೊಂಡಿದ್ದು ಜೂನ್.೭ ರ ಒಳಗೆ ಕಡಿಮೆಯಾಗದಿದ್ದರೆ ಅನಿವಾರ್ಯ ವಾಗಿ ಮತ್ತೆ ಲಾಕ್ ಡೌನ್ ವಿಸ್ತರಣೆ ಆಗಲಿದೆ ಎಂದು ತಜ್ಞರು ಅಭಿಪ್ರಾಯವಾಗಿದೆ.
ದೇಶದಲ್ಲಿ ಅಧಿಕ:
ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲೇ ಅತ್ಯಧಿಕವಾಗಿದೆ. ಜೂನ್. ೭ ರ ಒಳಗೆ ಸೋಂಕು ಮತ್ತು ಸಕ್ರಿಯ ಪ್ರಕರಣಗಳ ಇಳಿಕೆಯಾಗದಿದ್ದರೆ ಅನಿವಾರ್ಯವಾಗಿ ಮತ್ತೆ ಲಾಕ್ ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.ಸದ್ಯ ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ. ಕಳೆದ ಹದಿನೈದು ದಿನಗಳ ಹಿಂದೆ ೬ ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳ ಸಂಖ್ಯೆ ಕುಸಿತ ಕಂಡಿದೆ .ಈ ಸಂಖ್ಯೆ ಇನ್ನಷ್ಡು ಗಣನೀಯವಾಗಿ ಕುಸಿಯದಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ದೇಶದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಮತ್ತು ಸಕ್ರಿಯ ಪ್ರಕರಣಗಳು ದಾಖಲಾಗುತ್ತಿದ್ದ ಮಹಾರಾಷ್ಟ್ರದಲ್ಲಿ ಈ ಪ್ರಮಾಣ ಕಡಿಮೆಯಾಗಿದ್ದು ಕರ್ನಾಟಕದಲ್ಲಿ ಮಾತ್ರ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಇದಕ್ಕೆ ಕಡಿವಾಣ ಹಾಕಲು ಅನಿವಾರ್ಯವಾಗಿ ಮತ್ತಷ್ಟು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವ ಎಲ್ಲಾ ಸಾದ್ಯತೆಗಳಿವೆ.
ಸದ್ಯ ರಾಜ್ಯದಲ್ಲಿ ೪.೦೨ ಲಕ್ಷ ಸಕ್ರಿಯ ಪ್ರಕರಣಗಳು ಇರುವ ಹಿನ್ನೆಲೆಯಲ್ಲಿ ಈ ಸಂಖ್ಯೆಯನ್ನು ಇನ್ನಷ್ಟು ಕಡಿಮೆ ಮಾಡಲು ರಾಜ್ಯ ಸರ್ಕಾರ ವಿಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಜೂನ್ ಏಳರ ತನಕ ರಾಜ್ಯದ ಸ್ಥಿತಿಗತಿಯನ್ನು ಗಮನಿಸಿ ಸೋಂಕು ಮತ್ತು ಸಕ್ರಿಯ ಪ್ರಕರಣ ಇಳಿಕೆ ಯಾಗದಿದ್ದರೆ ಅನಿವಾರ್ಯವಾಗಿ ರಾಜ್ಯಸರ್ಕಾರ ಜೂನ್ ೭ ರ ನಂತರವೂ ವಿಸ್ತರಣೆ ಮಾಡುವುದು ಅನಿವಾರ್ಯ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಶಶಿಕುಮಾರ್ ಗಣೇಶನ್ ತಿಳಿಸಿದ್ದಾರೆ.