ಲಾಕ್‍ಡೌನ್‍ನಲ್ಲಿ ಅಲ್ಪ ವಿನಾಯಿತಿ


ಹುಬ್ಬಳ್ಳಿ, ಜೂ 6: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿದೆ. ರಾಜ್ಯ ಸರ್ಕಾರ ಜೂ. 14 ರವರೆಗೆ ಲಾಕ್‍ಡೌನ್ ಮುಂದುವರಿಸಲು ಸೂಚಿಸಿದೆ. ನಾಳೆಯಿಂದ (ಸೋಮವಾರ) ಜಿಲ್ಲೆಯಲ್ಲಿ ಲಾಕ್‍ಡೌನ್ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಇಲ್ಲಿನ ಸಕ್ರ್ಯೂಟ್ ಹೌಸ್‍ನಲ್ಲಿ ಜರುಗಿದ ಸಭೆಯಲ್ಲಿ ತಿಳಿಸಿದ ಅವರು, ಸದ್ಯ ಹಾಲು ತರಕಾರಿ ಸೇವೆಗಳಿಗೆ ಮಾತ್ರ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಅವಕಾಶವಿದೆ. ಈ ಸಮಯವನ್ನು ಬೆಳಿಗ್ಗೆ 10 ಗಂಟೆವರೆಗೆ ವಿಸ್ತರಿಸಿ ಹಾಲು, ತರಕಾರಿ, ಕಿರಾಣಿ ಅಂಗಡಿ, ಹೋಟಲ್ ಹಾಗೂ ಮದ್ಯ ಅಂಗಡಿಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ನೀಡಿ. ಹೋಟೆಲ್‍ಗಳ ಮೂಲಕ ಹೋಮ್ ಡಿಲೆವರಿಗೆ ರಾತ್ರಿ 8 ವರೆಗೆ ಸಮಯಾಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತ ಲಾಭುರಾಮ, ಜಿ.ಪಂ. ಸಿಇಓ ಡಾ.ಬಿ. ಸುಶೀಲ, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ವಾ.ಕ.ರ.ಸಾ.ಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯಶವಂತ ಮದೀನಕರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದ