ಲಾಕ್‍ಡೌನ್ ವೇಳೆಯಲ್ಲಿ ಅನವಶ್ಯಕ ಸಂಚಾರ: 52 ವಾಹನಗಳ ಜಪ್ತಿ

ಬೀದರ:ಮೇ.16: ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು, ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಅಂತಾ ಆದೇಶವಿದ್ದರು ಸಹ ನಿನ್ನೆ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 52 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್.ಅವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಸದರಿ ಸಾಂಕ್ರಾಮಿಕ ರೋಗವನ್ನು ತಡೆಯಲು ರಾಜ್ಯ ಸರ್ಕಾರವು ಮೇ 24ರವರೆಗೆ ಲಾಕಡೌನ್‍ಗೆ ಆದೇಶಿಸಿದೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್ ಮಾಸ್ಕ್ ಹಾಕದವರಿಗೆ ಒಟ್ಟು 1123 ಪ್ರಕರಣಗಳು ಹಾಕಿ 1,12,300 ರೂ. ದಂಡ ವಿಧಿಸಲಾಗಿದೆ.
ಇನ್ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.