ಲಾಕ್‍ಡೌನ್ ಹಿನ್ನಲೆ: ಚೆಕ್‍ಪೋಸ್ಟ್ ನಿರ್ಮಿಸಿ ತಪಾಸಣೆ

ಹನೂರು:ಏ:28: ರಾಜ್ಯ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯ ಪೊಲೀಸರು ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ಕೈಗೊಂಡಿದ್ದರು.
ಇನ್ಸ್‍ಪೆಕ್ಟರ್ ಸಂತೋಷ್ ಕಶ್ಯಪ್ ಅವರ ನೇತೃತ್ವದಲ್ಲಿ ತೀವ್ರ ತಪಾಸಣೆ ಕೈಗೊಂಡಿದ್ದು ತಪಾಸಣೆ ನಡೆಸಿ ವಾಹನಗಳನ್ನು ಬಿಡಲಾಗುತ್ತಿತ್ತು. ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದರು. ಇಂದು ಬೆಳಿಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳನ್ನು ಖರಿದಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ನಂತರ ಅಂಗಡಿಮುಂಗಟ್ಟುಗಳ ಮುಚ್ಚಲ್ಪಟ್ಟಿದ್ದವು. ಕೊರೊನಾ ಹಿನ್ನಲೆಯಲ್ಲಿ ಮುಂಚೆಯೇ ಸರ್ಕಾರ ಲಾಕ್‍ಡೌನ್ ಘೋಷಣೆ ಮುನ್ಸುಚನೆ ನೀಡಿದ್ದರಿಂದ ಜನತೆ ಅಗತ್ಯ ವಸ್ತುಗಳನ್ನು ಖರಿದಿಸಲು ಮುಗಿಬಿದ್ದಿದ್ದು ಕಂಡು ಬಂದಿತು.