ಲಾಕ್ ಡೌನ್: ಕೃಷಿ ಚಟುವಟಿಕೆಗಳಿಗೆ ಅವಕಾಶ‌ ನೀಡಿ ಜಿಲ್ಲಾಧಿಕಾರಿ ಆದೇಶ

ಕಲಬುರಗಿ,ಜೂ.6: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ಜಿಲ್ಲೆಯಾದ್ಯಂತ ಜೂ. 14ರ ಬೆಳಿಗ್ಗೆ 6 ಗಂಟೆ ವರೆಗೆ ಲಾಕ್ ಡೌನ್ ವಿಸ್ತರಿಸಿದ್ದು, ಈ ಅವಧಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ‌ 12 ಗಂಟೆ ವರೆಗೆ ಕೃಷಿ ಚಟುವಟಿಕೆಗಳಿಗೆ ಅವಕಾಶ‌ ನೀಡಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ರವಿವಾರ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಕರಗಳು, ಯಂತ್ರೋಪಕರಣಗಳು, ಬೀಜ ಹಾಗೂ ರಸಗೊಬ್ಬರ ಮಾರಾಟಕ್ಕೆ ಅನುಮತಿ ನೀಡಲಾಗಿದ್ದು, ಈ ಅಂಗಡಿಗಳು ಕಾರ್ಯನಿರ್ವಹಿಸಲು ಅನುಮತಿ‌ ನೀಡಿದೆ.