ಲಾಕ್ ಡೌನ್ ಕೊನೆಯ ಅಸ್ತ್ರ: ಎಚ್ಚರದಿಂದಿರಿ: ಪ್ರಧಾನಿ

ನವದೆಹಲಿ, ಏ..20-ಕೊರೋನಾ ಸೋಂಕಿನ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣ ‌ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರಗಳಿಗೆ ಲಾಕ್ ಡೌನ್ ಅಂತಿಮ ಅಸ್ತ್ರವಾಗಿರಲಿ. ಹೀಗಾಗಿ ದೇಶವನ್ನು ಲಾಕ್ ಡೌನ್ ಮಾಡಲು ಅವಕಾಶ ಮಾಡಿಕೊಡದಿರಿ ಎಂದು ಕೂಡ ಅವರು ಜನರಿಗೆ ಮನವಿ ಮಾಡಿದ್ದಾರೆ.

ದೇಶದಲ್ಲಿ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಲಾಕ್ ಡೌನ್ ನಿಂದ ಬಚಾವು ಮಾಡಿ ಎಂದು ಕೂಡ ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರಗಳು ಲಾಕ್ ಡೌನ್ ಅನ್ನು ಕೊನೆಯ ಅಸ್ತ್ರವಾಗಿ ಬಳಸಬೇಕು.‌ಸೂಕ್ಷ್ಮ ಕಂಟೇನ್ಮೇಂಟ್ ವಲಯಗಳಲ್ಲಿ ಹೆಚ್ಚು ಆದ್ಯತೆ ನೀಡಿ. ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದು ರಾಜ್ಯ ಸರ್ಕಾರಗಳಿಗೆ ಅವರು ಮನವಿ ಮಾಡಿದರು.

ದೇಶದ ಆರ್ಥಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಮಾಡುವ ಕಠಿಣ ನಿರ್ಧಾರಕ್ಕೆ ದೇಶದ ಜನರು ಅವಕಾಶ ಮಾಡಿಕೊಡಬಾರದು ಎಂದು ಅವರು ಹೇಳಿದ್ದಾರೆ

ಮನೆಯಿಂದ ಹೊರಬರದಿರಿ:

ದೇಶದಲ್ಲಿ ಎರಡನೇ ಹಂತದ ಕೋರೋನೋ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರಬೇಡಿ ಸುರಕ್ಷತೆಯ ಕಡೆಗೆ ಹೆಚ್ಚು ಒತ್ತು ನೀಡಿ ಎಂದು ಕಿವಿಮಾತು ಹೇಳಿದ್ದಾರೆ.

ದೇಶದಲ್ಲಿ ಆಮ್ಲಜನಕ ಕೊರತೆ ಇದ್ದು ಅದನ್ನು ಪೂರೈಕೆ ಮಾಡುವ ಕಡೆಗೆ ಹೆಚ್ಚಿನ ಗಮನವನ್ನು ಕೇಂದ್ರ ಸರ್ಕಾರ ವಹಿಸಿದೆ. ಲಸಿಕೆ ಉತ್ಪಾದನೆಯ ಪ್ರಮಾಣವನ್ನು ಕೂಡ ಹೆಚ್ಚಳ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಮೇ 1 ರಿಂದ 18 ವರ್ಷ ದಾಟಿದವರಿಗೆ ಲಸಿಕೆ:

ದೇಶದಲ್ಲಿ ಅತಿ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೇ ತಿಂಗಳ ಒಂದರಿಂದ ದೇಶದಲ್ಲಿ 18 ದಾಟಿದ ಎಲ್ಲರಿಗೂ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ ಜನರು ಲಸಿಕೆಯನ್ನು ಪಡೆದು ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸರಕಾರದ ಜತೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈಗಾಗಲೇ ದೇಶದ ಪ್ರಮುಖ ಔಷಧ ತಯಾರಿಕಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದ್ದು ಲಸಿಕೆ ಉತ್ಪಾದನೆಗೆ ಮತ್ತಷ್ಟು ವೇಗ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೃತಜ್ಞತೆ:

ಕೋವಿಡ್ ಸಂಕಷ್ಟದ ಸಮಯದಲ್ಲಿ ಸೋಂಕು ವಿರುದ್ಧ ಹೋರಾಟ ಮಾಡುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದರು.

ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಪಡೆಯ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಅವರ ಸೇವೆ ಸ್ಮರಣೀಯ ಎಂದು ಹೇಳಿದ್ದಾರೆ.

ಜಾಗೃತಿ ಮೂಡಿಸಿ:

ದೇಶದಲ್ಲಿ ಕೊರೋನಾ ಸೋಂಕು ಕುರಿತು ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಹೀಗಾಗಿ ಮಾಧ್ಯಮಗಳು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಹೇಳಿದ್ದಾರೆ

ದೇಶದಲ್ಲಿ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಉತ್ಪಾದನೆ ಮಾಡಿ ಜನರಿಗೆ ನೀಡುವ ಕೆಲಸ ಮಾಡಲಾಗುತ್ತದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ನೀಡಿಕೆ ಹೆಚ್ಚಳ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಗುಳೆ ಹೋಗಬೇಡಿ:

ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಗುಳೆ ಹೋಗಬೇಡಿ ತಾವು ಇರುವ ಕಡೆ ಸುರಕ್ಷತೆಯೊಂದಿಗೆ ಕೆಲಸ ಮಾಡಲಿ ಎಂದು ಅವರು ಕಾರ್ಮಿಕರಿಗೆ ಮಾಡಿದ್ದಾರೆ.

ದೇಶದಲ್ಲಿ ಲಸಿಕೆ ಹಾಕುವ ಕಾರ್ಯವನ್ನು ಹೆಚ್ಚಳ ಮಾಡಲಾಗುತ್ತದೆ ಸುರಕ್ಷತೆಗೆ ಆದ್ಯತೆ ನೀಡಿ ಎಂದು ಕೂಡ ಅವರು ಮಾಡಿದ್ದಾರೆ.