ಲಾಕ್ ಡೌನ್ ಹೇರುವ ಆಲೋಚನೆ ಇಲ್ಲ:ಕೇಜ್ರಿವಾಲ್

ನವದೆಹಲಿ, ಏ 2- ದೆಹಲಿಯಲ್ಲಿ ಲಾಕ್ಡೌನ್ ಜಾರಿಗೊಳಿಸುವ ಆಲೋಚನೆ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. 24 ತಾಸಿನಲ್ಲಿ 3,583 ಪ್ರಕರಣಗಳು ದಾಖಲಾಗಿವೆ‌ . ಸೋಂಕು ತಡೆಗೆ‌ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರು ಆತಂಕಪಡುವ ಅಗತ್ಯ ವಿಲ್ಲ ಎಂದರು.
ತ್ವರಿತವಾಗಿ ಲಸಿಕೆ ವಿತರಣೆಯ ಕಡೆ ಗಮನಹರಿಸಿದ್ದೇವೆ. ನಿನ್ನೆ 71000 ಮಂದಿಗೆ ಲಸಿಕೆ ನೀಡಿದ್ದೇವೆ ಎಂದು ಅವರು ವಿವರಿಸಿದರು.
ಇದೇ ವೇಳೆ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 81,466 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 469 ಸೋಂಕಿತರು ಮೃತಪಟ್ಟಿದ್ದಾರೆ ಮತ್ತು 50,356 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.