
ನೆಲ್ಲೂರು(ಆಂಧ್ರಪ್ರದೇಶ),ಮಾ.೨೯- ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲರ್ (ಟಿಟಿ)ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬುಚಿರೆಡ್ಡಿಪಾಲೆಂ ಮಂಡಲದ ದಾಮರಮಡುಗದ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಶ್ರೀಶೈಲಂನಿಂದ ನೆಲ್ಲೂರಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದ್ದು, ಮೃತರು ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ.
ಅಪಘಾತಘದಲ್ಲಿ ೭ ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾನೆ.
ಶ್ರೀಶೈಲಂ ಯಾತ್ರೆ ಮುಗಿಸಿ ನೆಲ್ಲೂರಿನತ್ತ ಹೊರಟಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ವಾಹನದಲ್ಲಿ ಒಟ್ಟು ೧೪ ಪ್ರಯಾಣಿಕರಿದ್ದು, ೮ ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಗಾಯಗೊಂಡಿರುವ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ