
ಬೆಂಗಳೂರು,ಮಾ.9- ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.
ಡಿಕ್ಕಿ ಹೊಡೆದ ನಂತರ ಒಂದಷ್ಟು ದೂರ ಕಾರನ್ನು ಲಾರಿ ಎಳೆದೊಯ್ದಿದೆ.ಮೃತರ ಹೆಸರು ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಹೊಸಕೋಟೆ ಸಂಚಾರ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಅಪಘಾತಗೊಂಡ ವಾಹನಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.