ಲಾರಿ ಪಲ್ಟಿ ನಾಲ್ವರು ಸಾವು

ಗ್ವಾಲಿಯರ್ (ಮಧ್ಯ ಪ್ರದೇಶ),ಜೂ.2- ವೇಗವಾಗಿ ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಜೌರಾಶಿ ಘಾಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನರವರ ಪಟ್ಟಣದಿಂದ ಗೋಧಿ ತುಂಬಿಕೊಂಡು ಹೊರಟಿದ್ದ ಲಾರಿಯು ಜೌರಾಶಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಲೋವಾ ಪೊಲೀಸರು, ತಕ್ಷಣ ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು.
ಚಾಲಕನು ಲಾರಿಯನ್ನು ಅತಿಯಾದ ವೇಗದಲ್ಲಿ ಚಾಲನೆ ಮಾಡಿದ್ದರಿಂದ, ನಿಯಂತ್ರಣ ತಪ್ಪಿದ ವಾಹನ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.