ಲಾಲೂಗೆ ಇಡಿ ಸಂಕಷ್ಟ

ಪಾಟ್ನಾ/ ನವದೆಹಲಿ,ಜ.೨೯- ರೈಲ್ವೆ ಸಚಿವಾಲಯದಲ್ಲಿ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ರೈಲ್ವೆ ಸಚಿವ ಲಾಲು ಯಾದವ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಪಿಎಂಎಲ್‌ಎಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾದ ಕೇಂದ್ರೀಯ ತನಿಖಾ ದಳ (ಸಿಬಿಐ) ನೀಡಿದ ದೂರಿನ ಅನ್ವಯ ಜಾರಿ ನಿರ್ದೇಶನಾಲಯ ಲಾಲು ಪ್ರಸಾದ್ ಯಾದವ್ ಅವರಿಗೆ ನೋಟೀಸ್ ಜಾರಿ ಮಾಡಿತ್ತು.
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವ ಸಾಧ್ಯತೆಯಿದೆ ಪಾಟ್ನಾದ ಜಾರಿ ನಿರ್ದೇಶನಾಲಯದ ಕಚೇರಿ ಬಳಿ ರಾಷ್ಟ್ರೀಯ ಜನತಾ ದಳ ಮುಖಂಡರು ಮತ್ತು ಕಾರ್ಯಕರ್ತರು ಜಮಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲ ದಿನಗಳ ಹಿಂದೆ ಇಡಿ ತಂಡ ಸಮನ್ಸ್ ಜಾರಿ ಮಾಡಿತ್ತು. ಅವರ ಪುತ್ರ ತೇಜಸ್ವಿ ಯಾದವ್‌ಗೂ ಸಮನ್ಸ್ ನೀಡಲಾಗಿದೆ.
ಆರೋಪಗಳೇನು
೨೦೦೪ ರಿಂದ ೨೦೦೯ ರವರೆಗೆ ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಗ್ರೂಪ್ ’ಡಿ’ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು ಮತ್ತು ಬದಲಿಗೆ ಅವರು ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವ ಲಾಲು ಪ್ರಸಾದ್ ಮತ್ತು ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. .