ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

ಬೆಂಗಳೂರು, ಆ.4- ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಶುಕ್ರವಾರ ಸಂಜೆ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ, ವಿವಿಧ ಬಗೆಹ ಹೂವಿನ ಅಲಂಕಾರಗಳನ್ನು ಗಮನಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು, ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು.

140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಶ್ರೀ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240 ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು.