ಲಿಂಗರಾಜ ಅಪ್ಪ ಕಾಲೇಜಿನಲ್ಲಿ ಐಇಇಇ ವಿದ್ಯಾರ್ಥಿ ಶಾಖೆ ಉದ್ಘಾಟನೆ

ಬೀದರ್:ಮೇ.7: ಇಲ್ಲಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನ್‍ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಯಂಡ್ ಎಲೆಕ್ಟ್ರಾನಿಕ್ಸ್ (ಐಇಇಇ) ವಿದ್ಯಾರ್ಥಿ ಶಾಖೆಯನ್ನು ಉದ್ಘಾಟಿಸಲಾಯಿತು.

ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ಅವರು ಉದ್ಘಾಟಿಸಿ, ಐಇಇಇ ವಿದ್ಯಾರ್ಥಿ ಶಾಖೆಯ ಮಹತ್ವ ವಿವರಿಸಿದರು.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಖೆ ಸದಸ್ಯರಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ನಿರ್ದೇಶಕ ಶರಣಬಸಪ್ಪ ದೇಶಮುಖ ಮಾತನಾಡಿ, ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಚಟುವಟಿಕೆಗಳಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಸದಾ ಬೆಂಬಲ ನೀಡುತ್ತ ಬಂದಿದೆ ಎಂದು ತಿಳಿಸಿದರು.

ಪ್ರಾಚಾರ್ಯೆ ವಿನಿತಾ ಪಾಟೀಲ ಮಾತನಾಡಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶರಣಬಸವಪ್ಪ ಅಪ್ಪ, ದಾಕ್ಷಾಯಿಣಿ ಎಸ್.ಅಪ್ಪ, ದೊಡ್ಡಪ್ಪ ಅಪ್ಪ ಹಾಗೂ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ ಪೆÇ್ರೀತ್ಸಾಹದಿಂದಾಗಿ ಕಾಲೇಜಿನಲ್ಲಿ ಐಇಇಇ ಕ್ಲಬ್ ರಚಿಸಲಾಗಿದೆ ಎಂದು ಹೇಳಿದರು.

ಕ್ಲಬ್ ರಚಿಸಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಐಇಇಇ ವಿದ್ಯಾರ್ಥಿ ಶಾಖೆಯ ಸಲಹೆಗಾರ ಡಾ. ಬಸವಲಿಂಗ ಸ್ವಾಮಿ ಹಿರೇಮಠ ನಿರೂಪಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.