ಲಿಂಗರಾಜ ಅಪ್ಪ ಕಾಲೇಜು: ಮಹಿಳಾ ದಿನಾಚರಣೆ

ಬೀದರ್:ಮಾ.7: ಇಲ್ಲಿಯ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.

ಡಾ. ವಿಜಯಶ್ರೀ ಬಶೆಟ್ಟಿ ಹಾಗೂ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕøತ ಶುಶ್ರೂಷಾಧಿಕಾರಿ ಲಕ್ಷ್ಮಿ ಮೇತ್ರೆ ಅವರಿಗೆ ಕಾಯಕ ರತ್ನ ಪ್ರಶಸ್ತಿ ನೀಡಿ, ಗೌರವಿಸಲಾಯಿತು.

ಸಮಾಜದಲ್ಲಿ ಎಲೆ ಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ ಸಂದೇಶ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು, ಮಹಿಳಾ ದಿನಾಚರಣೆಯು ಮಹಿಳೆಯರ ಕೊಡುಗೆ ಸ್ಮರಿಸುವ ಹಾಗೂ ಅವರನ್ನು ಗೌರವಿಸುವ ದಿನವಾಗಿದೆ ಎಂದು ಹೇಳಿದರು.
ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಪೂಜಾರ ಯೇರಿ, ಪ್ರಾಚಾರ್ಯೆ ವಿನಿತಾ ಪ್ರತಾಪುರ ಮಾತನಾಡಿದರು.
ಶರಣಬಸವೇಶ್ವರ ವಾಣಿಜ್ಯ, ಕಲಾ ಹಾಗೂ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಸತೀಶ ಪ್ರತಾಪುರ, ಕಾಲೇಜು ಸಿಬ್ಬಂದಿ ಇದ್ದರು.