ಲಿಂಗಸುಗೂರು ಪುರಸಭೆ ನರಸರೆಡ್ಡಿ ಪ್ರಭಾರಿ ಮುಖ್ಯಾಧಿಕಾರಿ

ಲಿಂಗಸುಗೂರು,ಅ. ೩೧- ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ಹುದ್ದೆಗೆ ಪ್ರಭಾರ ಮುಖ್ಯಾಧಿಕಾರಿಯಾಗಿ ಮಸ್ಕಿ ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಅವರನ್ನು ನಿಯೋಜಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಲಿಂಗಸುಗೂರು ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಅನಧಿಕೃತವಾಗಿ ಕರ್ತವ್ಯಕ್ಕೆ ಕಳೆದ ದಿನಗಳಿಂದ ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಕೆಲಸಗಳಿಗೆ ಅಡಚಣೆಯಾಗುತ್ತಿರುವುದನ್ನು ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಮುಂದಿನ ಆದೇಶದವರೆಗೆ ಲಿಂಗಸುಗೂರು ಪುರಸಭೆ ಮುಖ್ಯಾಧಿಕಾರಿ ಹುದ್ದೆಗೆ ಮಸ್ಕಿ ಪುರಸಭೆ ಮುಖ್ಯಾಧಿಕಾರಿಯನ್ನು ನಿಯೋಜನೆ ಮಾಡಿದ್ದಾರೆ.