ಲಿಂಗಸೂಗೂರು ಎಸಿಯವರಿಂದ ಗುರುಗುಂಟಾ ಗ್ರಾಮದಲ್ಲಿ ಕೋವಿಡ್ ಪರಿಶೀಲನೆ


ರಾಯಚೂರು, ಮೇ.೨೯- ಲಿಂಗಸೂಗೂರು ಸಹಾಯಕ ಆಯುಕ್ತ ರಾಜಶೇಖರ ಡಂಬಳ ಅವರು ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಯ ಸ್ಥಿತಿ ಗತಿಗಳನ್ನು ಪರಿಶೀಲಿಸಿದರು.
ನಂತರ ಗ್ರಾಮದ ವಿವಿಧ ವಾರ್ಡ್‌ಗಳಲ್ಲಿ ಸಂಚಾರಿಸಿ ಆರೋಗ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಮನೆ ಮನೆ ಸಮೀಕ್ಷೆಗೆ ಚಾಲನೆ ನೀಡಿದರು. ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಭೆ ನಡೆಸಿ ಕೋವಿಡ್ ಕುರಿತು ಜಾಗೃತಿ ಮೂಡಸಲು ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಕಂದಾಯ, ಪೊಲೀಸ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳಿದ್ದರು.