ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಿಂದ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಲಿ

ರಾಯಚೂರು,ಮಾ.೩-ಎಸ್. ಸಿ ಮೀಸಲು ಕ್ಷೇತ್ರವಾದ ಲಿಂಗಸೂಗೂರು ವಿಧಾನಸಭಾ ಕ್ಷೇತ್ರಕ್ಕೆ ಮಾದಿಗ ಸಮಾಜಕ್ಕೆ ಟಿಕೆಟ್ ನೀಡಬೇಕು ಎಂದು ಎಂಆರ್ ಎಚ್ ಎಸ್ ಜಿಲ್ಲಾಧ್ಯಕ್ಷ ಅಬ್ರಾಹಂ ಹೊನ್ನಟಗಿ ಒತ್ತಾಯಿಸಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಮಾದಿಗ ಸಮಾಜದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮಾಜದ ೪೨ಸಾವಿರ ಮತದಾರರಿದ್ದಾರೆ.೬೫೦೦ ಭೋವಿ, ೮ಸಾವಿರ ಛಲವಾದಿ ಹಾಗೂ ೧೧ ಸಾವಿರ ಬಂಜಾರ ಸಮುದಾಯದ ಮತದಾರರಿದ್ದಾರೆ. ಬಹುಸಂಖ್ಯಾತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕಿದೆ.ಆ ಪಕ್ಷಕ್ಕೆ ನಮ್ಮ ಬೆಂಬಲ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ಇದನ್ನು ಗಂಭೀರವಾದ ಪರಿಗಣಿಸಬೇಕು. ಇಲ್ಲದಿದ್ದರೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಯಪ್ಪ ಸಿರವಾರ, ರಾಘವೇಂದ್ರ ಬೋರೆಡ್ಡಿ,ಕೆ.ಪಿ.ಅನಿಲ್ ಕುಮಾರ,ನರಸಿಂಹಲು,ಮಲ್ಲೇಶ ಇದ್ದರು.