ಲಿಂಗಾಯತ ಜನ ಜಾಗೃತಿ ಸಮಾವೇಶವೇದಿಕೆ ನಿರ್ಮಾಣಕ್ಕೆ ಚಾಲನೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಸೆ.08: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ನಾಡಿದ್ದು ನಗರದ ಎಸ್ ಜಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಹಾನಗಲ್ ಕುಮಾರೇಶ್ವರರ 156ನೇ ಜಯಂತ್ಯುತ್ಸವ, ಗಣ್ಯರಿಗೆ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ  ಕಾರ್ಯಕ್ರಮಕ್ಕೆ ಇಂದು ವೇದಿಕೆ ನಿರ್ಮಾಣ ಕಾರ್ಯ ಆರಂಭಗೊಂಡಿತು.
ಮಹಾಸಭಾದ ಜಿಲ್ಲಾ ಅಧ್ಯಕ್ಷ ಚಾನಾಳ್ ಶೇಖರ್, ಮುಖಂಡರಾದ ಅಂಗಡಿ ಶಂಕರ್, ಶಿವಕುಮಾರ್ ಸ್ವಾಮಿ ಮೊದಲಾದವರು ಈ ಸಂದರ್ಭದಲ್ಲಿ ಪೂಜೆ ಸಲ್ಲಿಸಿದರು. ಬೃಹತ್ ವೇದಿಕೆ ನಿರ್ಮಾಣ ಮತ್ತು ಆಸನಗಳ ವ್ಯವಸ್ಥೆಯನ್ನು ಮಾಡಲಾಗಿತ್ತಿದೆ.
ಪಾಲ್ಗೊಳ್ಳಲು ಆದೇಶ:
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಸಂಘದ ಶಾಲಾ ಕಾಲೇಜು ಮುಖ್ಯಸ್ಥರಿಗೆ ಪತ್ರ ಬರೆದು. ವೀರಶೈವ ಲಿಂಗಾಯತ ಮಹಾಸಭಾ ಸೆ.10 ರಂದು ಹಮ್ಮಿಕೊಂಡಿರುವ ಸಮಾರಂಭದಲ್ಲಿ ಎಲ್ಲಾ ಶಾಲಾ ಕಾಲೇಜುಗಳ ಭೋದಕ ಮತ್ತು ಭೋದಕೇತರ ಸಿಬ್ಬಂದಿ ಪಾಲ್ಗೊಳ್ಳುವಂತೆ ಸೂಚಿಸಬೇಕು ಎಂದು ಆದೇಶಿಸಿದ್ದಾರೆ.

One attachment • Scanned by Gmail