ಲಿಂಗ ತಾರತಮ್ಯವನ್ನು ತಡೆಗಟ್ಟುವದು ಪ್ರತಿಯೊಬ್ಬರ ಜವಾಬ್ದಾರಿ : ಶರಣಬಸಪ್ಪ

ಗುರುಮಠಕಲ್:ಫೆ.18: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ. ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ. ಶಿಕ್ಷಣ ಇಲಾಖೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಾದಗಿರಿ ವತಿಯಿಂದ “ಭೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದ ಅನುಷ್ಠಾನ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ, ಏ ಎನ್ ಎಂ ಇವರಿಗೆ ಪ್ರಸವಪೂರ್ವ ಲಿಂಗ ತಪಾಸಣೆ ಮತ್ತು ಹೆಣ್ಣು ಬ್ರೂಣ ಹತ್ಯೆ ನಿಷೇಧ ಕಾಯ್ದೆ 1994ರ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಕಾರ್ಯಕ್ರಮದಲ್ಲಿ ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಶರಣಬಸಪ್ಪ ಅವರು ಉದ್ಘಾಟನೆ ಮಾಡಿ ತಮ್ಮ ಉದ್ಘಾಟನಾ ನುಡಿಯಲ್ಲಿ ಹೆಣ್ಣು ಬ್ರೂಣ ಹತ್ಯೆ ನಿಷೇಧ ಕಾಯ್ದೆಯ ಕುರಿತು ಹಾಗೂ ಸಮಾಜದಲ್ಲಿ ಲಿಂಗ ತಾರತಮ್ಯ ಅದಕ್ಕೆ ಕಾರಣ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಲಿಂಗ ತಾರತಮ್ಯವನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಗಳು ಏನು ಎನ್ನುವುದರ ಬಗ್ಗೆ ಹಾಗೂ ಮಹಿಳೆಯರ ಸಂರಕ್ಷಣೆಗಾಗಿ ಇರುವ ಮಹಿಳಾ ಸಹಾಯವಾಣಿ 112 ಕುರಿತು ವಿವರವಾಗಿ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳ ಸ್ಥಾನವನ್ನು ವಹಿಸಿದಂತಹ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದಂತಹ ಶ್ರೀ ಭಾಗರೆಡ್ಡಿ ಇವರು ಹೆಣ್ಣು ಭ್ರೂಣ ಹತ್ಯೆ ಎಂದರೇನು ಅದಕ್ಕೆ ಕಾರಣಗಳು ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸುತ್ತಾ, ಹೆಣ್ಣು ಬ್ರೂಣ ಹತ್ಯೆ ತಡೆಯುವಲ್ಲಿ ಅಂಗನವಾಡಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಇವರ ಜವಾಬ್ದಾರಿಗಳು ಏನು ಎಂಬುದರ ಬಗ್ಗೆ ತಿಳಿಸಿದರು. ಅಲ್ಲದೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು ಸಮಾಜದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗು ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಪ್ರಮುಖವಾಗಿದ್ದು ಅದಕ್ಕಾಗಿ ಎಲ್ಲರೂ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯ ಸ್ಥಾನವನ್ನು ವಹಿಸಿದಂತಹ ಡಾ. ಹಬೀಬ ವೈದ್ಯಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರ ಗುರುಮಠಕಲ್ ಇವರು ತಮ್ಮ ಅಧ್ಯಕ್ಷತೆಯ ನುಡಿಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ತಿಳಿಸುತ್ತಾ ಪ್ರತಿಯೊಬ್ಬ ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆಯಲೇಬೇಕು ಅಂದಾಗ ಮಾತ್ರ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕೀಯರಾದ ಶ್ರೀಮತಿ ರೇಣುಕಾ, ಶ್ರೀಮತಿ ಗಂಗೂಬಾಯಿ, ಶ್ರೀಮತಿ ಗೌರಮ್ಮ, ಶ್ರೀಮತಿ ಪುಷ್ಪ, ಹಾಗೂ ಶ್ರೀ ಮಹಾಂತೇಶ್, ಶ್ರೀ ಕಮಲೇಶ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.