ಲಿಂಗ ಪತ್ತೆ ನಿಷೇಧ ಕಾಯ್ದೆ ಸಮಿತಿ ಸಭೆ

ಚಿಕ್ಕಬಳ್ಳಾಪುರ ಸೆ.೨೨: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್ ಎಸ್.ಎಸ್. ಅವರು ಬುಧವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ಸಲಹಾ ಸಮಿತಿಯ ಸದಸ್ಯರೊಂದಿಗೆ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆಯ (ಪಿ.ಸಿ ಮತ್ತು ಪಿ.ಎನ್.ಡಿ.ಟಿ) ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಅಲ್ಟ್ರಾ ಸೌಂಟ್ ಸ್ಕ್ಯಾನಿಂಗ್ ಸೆಂಟರ್, ಡಯಾಗ್ನೋಸ್ಟಿಕ್ ಸೆಂಟರ್, ರೇಡಿಯಾಲಜಿಸ್ಟ್ ತಜ್ಞರ ಸೇರಿದಂತೆ ಮಾಹಿತಿ ಪಡೆದು ದಾಖಲೆಗಳನ್ನು ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾ ಆಶ್ರಿತ ರೋಗಗಳ ರೋಗ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್ ಎಂ., ವಾರ್ತಾ ಮತ್ತು ಪ್ರಚಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಜುಂಜಣ್ಣ, ಜಿಲ್ಲಾ ಸಲಹಾ ಸಮಿತಿಯ ಸದಸ್ಯರಾದ ಡಾ.ಎಂ.ವೆಂಕಟಾಚಲಪತಿ, ಡಾ.ವೆಂಕಟೇಶ್ ಪ್ರಸಾದ್, ಡಾ.ಅರ್ಜುನ್ ಬಹುದ್ದೂರ್, ವೆಂಕಟರೆಡ್ಡಿ, ಡಾ.ಎ.ಜೆ.ಸುಧಾಕರ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.