ಲಿಂಗ ಸಮಾನತೆಯಿಂದ ಸುಂದರ ಸಮಾಜ ನಿರ್ಮಾಣ ಸಾಧ್ಯ

ಚಿತ್ರದುರ್ಗ.ಮಾ.೯: ಲಿಂಗ ಸಮಾನತೆಯಿಂದ ಸುಂದರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ  ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೆಣ್ಣು ಮತ್ತು ಗಂಡು ಜೈವಿಕವಾಗಿ ಭಿನ್ನತೆಯಿದ್ದರೂ ಅವರಲ್ಲಿರುವ ಆತ್ಮ ಚೈತನ್ಯ ಒಂದೇಯಾಗಿರುತ್ತದೆ. ಕುಟುಂಬ ಮತ್ತು ಸಮಾಜದ ಪ್ರಗತಿಯಲ್ಲಿ ಮಹಿಳೆಯ ಪಾತ್ರ ಮುಖ್ಯವಾಗಿದ್ದು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುತ್ತಾಳೆ ಎಂದು ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ಮಹಿಳೆ ಪುರುಷನಂತೆಯೇ ಎಲ್ಲಾ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿದ್ದಾಳೆ. ಜಗತ್ತಿನ ಸಾಧಕರ ಸಾಧನೆಯ ಹಿಂದೆ ಅವಳ ಪ್ರೇರಣೆ ಇದೆ. ಆರ್ಥಿಕ ಸಬಲೀಕರಣದ ಮೂಲಕ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.ಉಪ ಪ್ರಾಂಶುಪಾಲ ಡಿ.ಆರ್.ಕೃಷ್ಣಮೂರ್ತಿ, ಉಪನ್ಯಾಸಕರಾದ ಸಿ.ಎಸ್.ಲೀಲಾವತಿ, ವಿ.ಕನಕಮ್ಮ, ಕಚೇರಿ ಅಧೀಕ್ಷಕರಾದ ಗೀತಾ, ಸಹಾಯಕ ಸಾಂಖಿಕ ಅಧಿಕಾರಿ ರೂಪಾ, ದ್ವಿತೀಯ ದರ್ಜೆ ಸಹಾಯಕರಾದ ಸೌಭಾಗ್ಯಮ್ಮ, ನಿರ್ಮಲ, ವನಜಾಕ್ಷಮ್ಮ ಮತ್ತಿತರರಿದ್ದರು.