ಲಿಂಗ ಸಮಾನತೆ ಕಾಪಾಡುವಲ್ಲಿ ಸಮುದಾಯದ ಪಾತ್ರ ಮಹತ್ವದ್ದು

ಗದಗ,ಜ25: ಲಿಂಗ ತಾರತಮ್ಯವನ್ನು ಹೋಗಲಾಡಿಸಿ ಲಿಂಗ ಸಮಾನತೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಮುದಾಯದ , ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಉಳಿಸಿ ಅವರನ್ನು ಬೆಳೆಸುವುದು, ಅವರಿಗೆ ಶಿಕ್ಷಣ ಕೊಡುವುದು, ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದಲೇ ಸರ್ಕಾರದಿಂದ ಮಗಳನ್ನು ಉಳಿಸಿ ಮಗಳನ್ನು ಓದಿಸಿ ( ಬೇಟಿ ಬಚಾವೋ ಬೇಟಿ ಪಡಾವೋ) ಯೋಜನೆಯನ್ನು ಜಾರಿಗೆ ತರಲಾಗಿದೆ. ಬಾಲ್ಯ ವಿವಾಹ ನಿಷೇಧ ಹಾಗೂ ಫೆÇೀಕ್ಸೋ ಅಧಿನಿಯಮದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಹೆಣ್ಣುಮಕ್ಕಳಿಗೆ ಇರುವ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದರು.

ಶ್ರೀಮತಿ ಶಕುಂತಲಾ ಸಿಂಧನೂರ ಅವರು ಉಪನ್ಯಾಸ ನೀಡಿ ಮಾತನಾಡಿ ಹೆಣ್ಣು ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಲಿಂಗಾನುಪಾತ ಸುಧಾರಣೆಗಾಗಿಯೇ ಸರ್ಕಾರದಿಂದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಜಾರಿಗೆ ತರಲಾಗಿದ್ದು ಹೆಣ್ಣುಮಕ್ಕಳನ್ನು ರಕ್ಷಿಸುವುದು ಮತ್ತು ಅವರನ್ನು ಓದಿಸುವುದು ಮುಖ್ಯವಾಗಿದೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಕೊಡುಗೆ ಕೊಟ್ಟಿದ್ದಾರೆ. ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರಿಗೆ ಪೆÇ್ರೀತ್ಸಾಹಿಸುವುದು ಪಾಲಕರ ಕರ್ತವ್ಯವಾಗಿದೆ. ಹೆಣ್ಣು ಮಕ್ಕಳಿಗಾಗಿ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯಗಳ ಸದುಪಯೋಗವಾಗಬೇಕೆಂದರು.

ಇದೇ ಸಂದರ್ಭದಲ್ಲಿ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹೆಣ್ಣು ಮಕ್ಕಳನ್ನು ಸನ್ಮಾನಿಸಲಾಯಿತು ಹಾಗೂ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಯೋಜನೆಯಡಿ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು ಹಾಜರಿದ್ದರು.

ಸುವರ್ಣಾ ಪತ್ತಾರ ಪ್ರಾರ್ಥಿಸಿದರು. ನಯನಾ ಅಳವಂಡಿ ಸ್ತ್ರೀ ಕುರಿತು ಗೀತೆ ಪ್ರಸ್ತುತಪಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಕಮಲಾ ಸರ್ವರನ್ನು ಸ್ವಾಗತಿಸಿದರು. ಮಹಿಳಾ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ರಾಧಾ ಮಣ್ಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನೀತಾ ನಾಡಿಗೇರ ಕಾರ್ಯಕ್ರಮ ನಿರೂಪಿಸಿದರು. ರಾಜು ಕಂಠಗೊಣ್ಣವರ ವಂದಿಸಿದರು.