ಲೀಡ್ ಬ್ಯಾಂಕ್ ಮುಂದೆ ಕೆಪಿಆರ್‍ಎಸ್ ಪ್ರತಿಭಟನೆ

ಕಲಬುರಗಿ,ಡಿ.26-ಬರಗಾಲ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ಅನ್ನದಾತರಿಗೆ ಸಾಲ ವಸೂಲಾತಿ ನೋಟಿಸ್ ನೀಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್‍ಗಳ ನೀತಿ ವಿರೋಧಿಸಿ ಮತ್ತು ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ರೈತರ ನೆರವಿಗೆ ಧಾವಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‍ಎಸ್) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಲೀಡ್ ಬ್ಯಾಂಕ್ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಂತರ ಲೀಡ್ ಬ್ಯಾಂಕ್‍ನ ಪ್ರಧಾನ ವ್ಯವಸ್ಥಾಪಕರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ದಿಲೀಪ ನಾಗೂರೆ, ಖಜಾಂಚಿ ಸುಭಾಷ ಹೊಸಮನಿ, ಮುಖಂಡರಾದ ಎಂ.ಬಿ.ಸಜ್ಜನ್, ಪ್ರಕಾಶ ಜಾನೆ, ರಾಮಪ್ಪ ಹುರುಮುಂಜಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.